

ಹರಿಹರ: ಕನ್ನಡ ರಾಜೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡುವಂತೆ ಶಾಸಕ ಬಿ.ಪಿ. ಹರೀಶ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ರಾಜೋತ್ಸವ ಕೇವಲ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಸೀಮಿತವಾಗದೆ ಸಾರ್ವಜನಿಕರು ಸಹ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಬೇಕು. ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಬೇಕು. ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು, ಹಿರಿಯ ಮುಖಂಡರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಹಬ್ಬ ಆಚರಣೆ ಆಗಲಿ ಎಂದರು.
ಕರುನಾಡ ಕದಂಬ ರಕ್ಷಣಾ ವೇದಿಕೆ ಅಧ್ಯಕ್ಷ ಎಚ್. ಸುಧಾಕರ್, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಸ್.ಎಚ್. ಹೂಗಾರ್, ಕಾರ್ವಿುಕ ಮುಖಂಡ ಎಚ್.ಕೆ. ಕೊಟ್ರಪ್ಪ, ಬಿ. ಮುಗ್ದಂ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ರಿಯಾಜ್ ಅಹ್ಮದ್, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.
ಪ್ರಭಾರಿ ತಹಸೀಲ್ದಾರ್ ಎಚ್.ಬಿ. ಪ್ರಭಾಕರ್ ಗೌಡ್ರು, ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರುಗಪ್ಪ, ನಗರಸಭೆ ಎಇಇ ವಿನಯಕುಮಾರ್, ಪಿಎಸ್ಐ ಶ್ರೀಪತಿ ಗಿನ್ನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹನುಮಂತಪ್ಪ ಲಮಾಣಿ, ಟಿಎಚ್ಒ ಡಾ. ಅಬ್ದುಲ್ ಖಾದರ್, ಕೃಷಿ ಸಹಾಯಕ ನಿರ್ದೇಶಕ ನಟರಾಜ್, ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಚಿದಾನಂದ.ಎಂ. ಕಂಚಿಕೇರಿ, ಮಂಜುನಾಥ್ ಪೂಜಾರ್, ರಮೇಶ್ ಮಾನೆ, ಪ್ರೀತಂ ಬಾಬು, ರಾಜೇಶ್ ಇತರರಿದ್ದರು.