ಶಾಸಕ ಬಾಲಚಂದ್ರ ಕಾರ್ಯ ಮಾದರಿ

25MDL1-Web
ಮೂಡಲಗಿ ಪಟ್ಟಣದಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿ ಕುಟುಂಬಗಳಿಗೆ ಕೊಡಮಾಡಿದ ಆಹಾರ ಧಾನ್ಯ ಕಿಟ್ ವಿತರಿಸಲಾಯಿತು. ಜಿ.ಪಂ. ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ, ಪುರಸಭೆ ಸದಸ್ಯ ಈರಣ್ಣ ಕೊಣ್ಣೂರ, ವಿಜಯ ಸೋನವಾಲಕರ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ನಿಂಗಪ್ಪ ಫಿರೋಜಿ, ಈರಣ್ಣ ಹೊಸೂರ, ಸಿಪಿಐ ವೆಂಕಟೇಶ ಮುರನಾಳ ಇತರರು ಇದ್ದರು.
Published on

ಮೂಡಲಗಿ: ಅರಬಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯ ನೀಡುತ್ತಿರುವ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಮೂಡಲಗಿ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಶ್ಲಾಘಿಸಿದರು.

ಪಟ್ಟಣದಲ್ಲಿ ಶನಿವಾರ ಕರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅರಬಾವಿ ವಿಧಾನಸಭಾ ಮತಕ್ಷೇತ್ರದಲ್ಲಿ 34 ಗ್ರಾಪಂಗಳಿದ್ದು, ಇದರಲ್ಲಿ 77 ಗ್ರಾಮಗಳಿವೆ. ಕ್ಷೇತ್ರದ ಪ್ರತಿಯೊಂದು ಕುಟುಂಬಕ್ಕೆ ಬಡವ-ಶ್ರೀಮಂತ ಎಂಬ ಭೇದಭಾವ ಮಾಡದೆ ಎಲ್ಲರಿಗೂ ಸ್ವಂತ ವೆಚ್ಚದಲ್ಲಿ ಮಾಡುತ್ತಿರುವ ಸೇವೆ ಕಾರ್ಯ ಇತರರಿಗೆ ಮಾದರಿಯಾಗಿದೆ. 76258 ಕುಟುಂಬಗಳಿಗೆ ಒಟ್ಟು 10 ದಿನಗಳಿಗೆ ಆಗುವಷ್ಟು ದಿನಸಿ ಹಾಗೂ ದಿನಬಳಕೆ ವಸ್ತುಗಳನ್ನು ನೀಡುತ್ತಿದ್ದಾರೆ. ಕರೊನಾ ಸೋಂಕು ಕಾಣಿಸಿಕೊಂಡಾಗಿನಿಂದ ಶಾಸಕರ ಆದೇಶದ ಮೇರೆಗೆ ಪ್ರತಿ ಗ್ರಾಮಗಳಿಗೆ ತಾಲೂಕು ಆಡಳಿತ ಮತ್ತು ಟೀಂ ಎನ್‌ಎಸ್‌ಎಫ್ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಜತೆಗೆ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನತೆಗೆ 2.50 ಲಕ್ಷ ಮಾಸ್ಕ್ ನೀಡಿದ್ದಾರೆ. ನಗರ ಪ್ರದೇಶಗಳಲ್ಲಿರುವ ಸ್ಲಂ ಪ್ರದೇಶದ ನಿರ್ಗತಿಕ ಕುಟುಂಬಗಳಿಗೆ ಪ್ರತಿದಿನ 1 ಲೀಟರ್‌ನಂತೆ ಉಚಿತವಾಗಿ ನಂದಿನಿ ಹಾಲು ವಿತರಿಸುತ್ತಿದ್ದಾರೆ ಎಂದು ವಿವರಿಸಿದರು.

ತಹಸೀಲ್ದಾರ್ ದಿಲ್‌ಶಾದ್ ಮಹಾತ ಹಾಗೂ ಡಿವೈಎಸ್‌ಪಿ ಡಿ.ಟಿ. ಪ್ರಭು ಮಾತನಾಡಿ, ಬಾಲಚಂದ್ರ ಜಾರಕಿಹೊಳಿ ಅವರು ಹಸಿದ ಕುಟುಂಬಗಳಿಗೆ ಅನ್ನ ನೀಡುತ್ತಿದ್ದಾರೆ. ಇವರ ಸೇವೆ ಇಡೀ ನಾಡಿಗೆ ಮಾದರಿಯಾಗಿದೆ ಎಂದರು. ಜಿ.ಪಂ. ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ, ಪುರಸಭೆ ಸದಸ್ಯ ಈರಣ್ಣ ಕೊಣ್ಣೂರ, ವಿಜಯ ಸೋನವಾಲಕರ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ನಿಂಗಪ್ಪ ಫಿರೋಜಿ, ಈರಣ್ಣ ಹೊಸೂರ, ಸಿಪಿಐ ವೆಂಕಟೇಶ ಮುರನಾಳ, ರವಿ ಸೋನವಾಲಕರ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ನಾಗೇಶ ಶೇಖರಗೋಳ, ಸಂತೋಷ ಸೋನವಾಲಕರ, ರವಿ ಸಣ್ಣಕ್ಕಿ, ಹನುಮಂತ ತೇರದಾಳ, ಗೋಕಾಕ ಬಿಇಒ ಜಿ.ಬಿ.ಬಳಗಾರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪುರಸಭೆ ಸದಸ್ಯರು ಇದ್ದರು.

ವಿಶ್ವವ್ಯಾಪಿಯಾಗಿ ಹರಡಿರುವ ಕರೊನಾ ವೈರಸ್ ಓಡಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾರ್ಚ್ 24ರಿಂದ ಜಾರಿಯಲ್ಲಿರುವ ಲಾಕ್‌ಡೌನ್ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಲನೆ ಮಾಡಬೇಕಾದುದ್ದು ನಮ್ಮೆಲ್ಲರ ಕರ್ತವ್ಯ. ಮೇ 3ರ ವರೆಗೆ ಲಾಕ್‌ಡೌನ್ ಇರುವುದರಿಂದ ಎಲ್ಲರೂ ಮನೆಯಲ್ಲಿಯೇ ಇದ್ದು ಸಹಕರಿಸಬೇಕು.| ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net