ಗ್ಯಾರಂಟಿ ಜತೆಗೆ ಅಭಿವೃದ್ಧಿಗೆ ಅನುದಾನ

chn may june 04 guddli poje. (1)
Published on

ಚನ್ನಗಿರಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರು ಮಾಡಿದೆ. ಈಗಾಗಲೇ ಬಂದಿರುವ ಅನುದಾನದಲ್ಲಿ ಅವಶ್ಯಕತೆ ಇರುವ ಕಡೆಗಳಲ್ಲಿ ಕಾಮಗಾರಿಯನ್ನು ಮಾಡಲಾಗುತ್ತದೆ ಎಂದು ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಅಲ್ಪಸಂಖ್ಯಾತರ ಕಾಲನಿಯಲ್ಲಿ ಬುಧವಾರ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಈಗಾಗಲೇ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ 5 ಕೋಟಿ ರೂ. ಅನುದಾನ ಮಂಜೂರಾಗಿದೆ. ರಾಜ್ಯದ ಜನತೆಯ ಆಶೀರ್ವಾದದಿಂದ ಉತ್ತಮ ಕಾರ್ಯಗಳನ್ನು ಮಾಡುತ್ತಾ ಕಾಂಗ್ರೆಸ್ ಎರಡು ವರ್ಷ ಪೂರೈಸಿದೆ, ಮುಂದಿನ ಮೂರು ವರ್ಷದಲ್ಲಿ ಅಭಿವೃದ್ಧಿ ಪರ್ವವನ್ನು ಪ್ರಾರಂಭ ಮಾಡಲಿದೆ ಎಂದರು.

ಕಾಮಗಾರಿ ಗುಣಮಟ್ಟದ್ದಾಗಿರಬೇಕು, ಕಳಪೆ ಎಂದು ದೂರು ಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಮನೆಯ ಮುಂದೆ ರಸ್ತೆ, ಚರಂಡಿ ಮಾಡುವಾಗ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪುರಸಭೆ ಸದಸ್ಯ ಇಮ್ರಾನ್, ಸೈಯದ್ ಗೌಸ್​ಪೀರ್, ಜರೀನಾಬೀ, ಲಿಯಾಕತ್ ಅಲಿ, ತನ್ವೀರ್, ಪುರಸಭೆ ಮಾಜಿ ಅಧ್ಯಕ್ಷೆ ಶಂಶದ್ ಉನ್ನೀಸಾ, ಮಾಜಿ ಉಪಾಧ್ಯಕ್ಷ ಅಪೋ›ಸ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net