ನಡೆಯದ ಸಿಎಂ ಕುತಂತ್ರ, ರಾಜೀನಾಮೆಗೆ ಅರವಿಂದ ಬೆಲ್ಲದ ಆಗ್ರಹ

wp-1727189498717.jpg
Published on

ಹುಬ್ಬಳ್ಳಿ: ಅಧಿಕಾರ ದುರ್ಬಳಕೆ, ಸ್ವಜನ ಪಕ್ಷಪಾತ ಎಸಗಿ ಮೈಸೂರಿನ ಮೂಡಾ ಪ್ರಕರಣದಲ್ಲಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಿದ್ದರಾಮಯ್ಯನವರು ನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ದಲಿತರ ಭೂಮಿಯನ್ನು ಕಬಳಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮ ವಿರುದ್ಧದ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಅಲ್ಲದೇ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸತ್ಯಕ್ಕೆ ಸಿಕ್ಕ ಜಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಡವರ ಭೂಮಿ ಕಸಿದ ಪಾಪ, ರಾಜಕೀಯಕ್ಕಾಗಿ ರಾಜ್ಯಪಾಲರನ್ನು ನಿಂದಿಸಿದ ಪಾಪ ಸುಮ್ಮನೆ ಬಿಟ್ಟೀತೇ? ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಇನ್ನಾದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬೆಲ್ಲದ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net