ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಶಾಸಕ ಭೀಮಣ್ಣ ನಾಯ್ಕ ಅಭಯ

MLA Bhimanna Naik office opening
Published on

ಸಿದ್ದಾಪುರ: ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಹದಗೆಟ್ಟಿವೆ.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದ್ದು, ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದ್ದೇನೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ತಾಪಂ ಕಚೇರಿಯ ಆವರಣದಲ್ಲಿ ಗುರುವಾರ ಶಾಸಕರ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಟಣದ ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಶರಾವತಿ ನದಿಯಿಂದ ನೀರು ತರುವ ಯೋಜನೆಯ ವ್ಯವಸ್ಥೆ ಮಾಡಲಾಗುವುದು. ಆರೋಗ್ಯ, ನೀರು, ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು ಎಂದರು.


ಕಾಂಗ್ರೆಸ್ ಜನಪರ ಕೆಲಸ ಮಾಡುವ ಸರ್ಕಾರವಾಗಿದೆ. ಸಚಿವ ಮಂಕಾಳ ವೈದ್ಯ ಅವರ ಸಹಕಾರದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲಾಗುವುದು.

ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಜನರ ಕೆಲಸವನ್ನು ಮಾಡುತ್ತಿದ್ದೆ. ಈಗ ಜನರ ಪ್ರತಿನಿಧಿಯಾಗಿದ್ದೇನೆ. ಇನ್ನಷ್ಟು ಜನಪರ ಕೆಲಸ ಮಾಡುತ್ತೇನೆ. ಈ ಕಚೇರಿಯಲ್ಲಿ ಒಬ್ಬ ಸಿಬ್ಬಂದಿ ಇರುತ್ತಾರೆ. ಸಾರ್ವಜನಿಕರಿಗೆ ಕಚೇರಿಯ ಬಾಗಿಲು ಸದಾ ತೆರೆದಿರುತ್ತದೆ. ಜನರು ತಮ್ಮ ಸಮಸ್ಯೆಗಳನ್ನು ಇಲ್ಲಿ ಯಾವುದೇ ಹಿಂಜರಿಕೆ ಇಲ್ಲದೆ ಹೇಳಬಹುದು ಎಂದು ಭೀಮಣ್ಣ ನಾಯ್ಕ ಹೇಳಿದರು.

ಬ್ಲಾಕ್ ಕಾಂಗ್ರೆಸ್ ತಾಲೂಕು ಸಮಿತಿ ಅಧ್ಯಕ್ಷ ವಸಂತ ನಾಯ್ಕ, ಪ್ರಮುಖರಾದ ವಿ.ಎನ್. ನಾಯ್ಕ ಬೇಡ್ಕಣಿ, ಕೆ.ಜಿ. ನಾಗರಾಜ,ನಾಸೀರ್ ವಲ್ಲಿಖಾನ್, ಲಂಬೋದರ ಹೆಗಡೆ, ಗಾಂಧೀಜಿ ನಾಯ್ಕ, ವೀರಭದ್ರ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net