ಶಾಸಕ ಭೀಮಾನಾಯ್ಕ ವರ್ತನೆ ಖಂಡಿಸಿ ನ.11ಕ್ಕೆ ಹಗರಿಬೊಮ್ಮನಹಳ್ಳಿ ಬಂದ್: ಮಾಜಿ ಎಂಎಲ್‌ಎ ನೇಮಿರಾಜ ನಾಯ್ಕ ಹೇಳಿಕೆ

91120 HB Halli Meeting on Band
ಹಗರಿಬೊಮ್ಮನಹಳ್ಳಿಯಲ್ಲಿ ನ.11ರಂದು ಬಂದ್, ಪ್ರತಿಭಟನೆ ನಿಮಿತ್ತ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ನೇಮಿರಾಜ ನಾಯ್ಕ ಮಾತನಾಡಿದರು.
Published on

ಹಗರಿಬೊಮ್ಮನಹಳ್ಳಿ: ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಶಾಸಕ ಎಸ್.ಭೀಮಾನಾಯ್ಕ ನಡೆದುಕೊಂಡ ರೀತಿ ಖಂಡಿಸಿ ನ.11ರಂದು ಹಗರಿಬೊಮ್ಮನಹಳ್ಳಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ನೇಮಿರಾಜ ನಾಯ್ಕ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿ ಬಳಿ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ಬಂದ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನ.7ರಂದು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಶಾಸಕ ಭೀಮಾನಾಯ್ಕ ಬಿಜೆಪಿ ಮಂಡಲ ಅಧ್ಯಕ್ಷ ಹಾಗೂ ಎಸ್ಟಿ ಮೋರ್ಚಾದ ಅಧ್ಯಕ್ಷರಿಗೆ ಅವಮಾನಿಸಿದ್ದಾರೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಅವಮಾನಿಸಿದರೂ ಸಹಿಸುವುದಿಲ್ಲ. ತೋಳು ತಟ್ಟಿ ಸವಾಲು ಹಾಕುವುದು ಶಾಸಕರ ಸ್ಥಾನಕ್ಕೆ ಶೋಭೆಯಲ್ಲ. ಹೀಗಾಗಿ ಬಿಜೆಪಿಯಿಂದ ಹಬೊಹಳ್ಳಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ಕೊಟ್ಟೂರು, ಮರಿಯಮ್ಮನಹಳ್ಳಿ ಹಾಗೂ ಹಬೊಹಳ್ಳಿ ತಾಲೂಕಿನ ಬೂತ್‌ಮಟ್ಟದ ಕಾರ್ಯಕರ್ತರು ಭಾಗವಹಿಸಬೇಕು ಎಂದು ತಿಳಿಸಿದರು.

ಮಂಡಲ ಅಧ್ಯಕ್ಷ ಎಸ್.ಎಂ.ವೀರೇಶ್ವರಸ್ವಾಮಿ ಮಾತನಾಡಿದರು. ಬಿಜೆಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ಗರಗದ ಪ್ರಕಾಶ್, ನಗರ ಘಟಕದ ಅಧ್ಯಕ್ಷ ಜಿ.ಎಂ.ಜಗದೀಶ್, ಕಾರ್ಯದರ್ಶಿ ಬ್ಯಾಟಿ ನಾಗರಾಜ ಪುರಸಭೆ ಸದಸ್ಯ ಮೃತ್ಯುಂಜಯ, ಮುಖಂಡರಾದ ಕೆ.ಎಂ.ತಿಪ್ಪೇಸ್ವಾಮಿ, ಕೋಗಳಿ ಸಿದ್ದಲಿಂಗನಗೌಡ, ಭದ್ರವಾಡಿ ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net