ಶಾಸಕ ಭೀಮಣ್ಣ ಕಾಲೇಜ್‌ಗಳಿಗೆ ಭೇಟಿ

MLA-Bhimanna-Naik-visit-colleges
Published on

ಸಿದ್ದಾಪುರ:ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ ಹಾಗೂ ಸಮಸ್ಯೆ ಆಲಿಸಿದರು.

ತಾಲೂಕಿನ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಕಾಲೇಜಿನ ಸಮಸ್ಯೆ ಆಲಿಸಿ ಕಾಲೇಜಿಗೆ ಅಗತ್ಯವಿರುವ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು. ಪ್ರವೇಶಾತಿ ಬಯಸಿ ಬರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ ನೀಡುವಂತೆ ಪ್ರಚಾರ್ಯರಿಗೆ ಸೂಚಿಸಿದರು. ನಂತರ ಹಾಳದಕಟ್ಟಾ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಆಗಮಿಸಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರೀಯೆ, ಕಲಿಕೆಯ ಗುಣಮಟ್ಟ ಹಾಗೂ ಇತರ ಸೌಲಭ್ಯಗಳ ಮಾಹಿತಿ ಪಡೆದುಕೊಂಡರು. 

 ಮಧ್ಯಾಹ್ನ ಇಲ್ಲಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯರು, ಉಪನ್ಯಾಸಕರೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಾಜರಾತಿ, ಶಿಸ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ಪಡೆದು ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದರು. 

 ಈ ಸಂದರ್ಭದಲ್ಲಿ ಕಾಲೇಜುಗಳ ಪ್ರಾಚಾರ್ಯರಾದ ಸತೀಶ ನಾಯ್ಕ, ಶಾಂತಾರಾಮ, ಬಿ.ಎಸ್.ಹೆಗಡೆ, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಪ್ರಮುಖರಾದ ವಿ.ಎನ್.ನಾಯ್ಕ, ಬಿ.ಆರ್.ನಾಯ್ಕ, ಬಾಲಕೃಷ್ಣ ನಾಯ್ಕ, ಬಾಬು ನಾಯ್ಕ, ಎಸ್.ಕೆ.ನಾಯ್ಕ, ಮಂಜುನಾಥ ನಾಯ್ಕ ತ್ಯಾರ್ಸಿ, ಅಣ್ಣಪ್ಪ ಶಿರಳಗಿ, ಎನ್.ಟಿ.ನಾಯ್ಕ, ವಿನಾಯಕ ಕೊಂಡ್ಲಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net