ಜಿಲ್ಲಾ ಪದಾಧಿಕಾರಿಗಳು ಪಕ್ಷದ ಚೌಕಟ್ಟಲಿ ಕಾರ್ಯನಿರ್ವಹಿಸಲಿ, ಶಾಸಕ ಭೀಮಣ್ಣ ನಾಯ್ಕ ಸಲಹೆ

28sirsi3- cong
Published on

ಶಿರಸಿ: ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳು ಶಿಸ್ತು ಅಳವಡಿಸಿಕೊಳ್ಳುವ ಜತೆಗೆ ಪಕ್ಷದ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದವರು ಸದಸ್ಯರು ಮತ್ತು ಸ್ಥಳೀಯ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಪಕ್ಷವನ್ನು ಬಲಪಡಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಅವರು ಪಕ್ಷದ ಪ್ರತಿಯೊಬ್ಬ ಪಧಾಧಿಕಾರಿಯನ್ನು ವೈಯುಕ್ತಿಕವಾಗಿ ಮಾತನಾಡಿಸಿ, ಅವರ ಅಭಿಪ್ರಾಯ ಸಂಗ್ರಹಿಸಿದರು. ನಂತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಂಘಟನಾತ್ಮಕ ಚಟುವಟಿಕೆ ತೀವ್ರಗೊಳಿಸಲು ಮತ್ತು ಬಿಜೆಪಿಯವರು ಮಾಡುತ್ತಿರುವ ಸುಳ್ಳು ಆರೋಪಗಳ ವಿರುದ್ಧ ತಕ್ಕ ಉತ್ತರ ನೀಡಲು ಸೂಚನೆ ನೀಡಿದರು..

ಮುಖಂಡರಾದ ನಿವೇದಿತ ಆಳ್ವ, ಜಿಲ್ಲಾ ಉಪಾಧ್ಯಕ್ಷ ರಾಮಾ ಮೊಗೇರ, ಆರ್.ಎಚ್. ನಾಯ್್ಕ ವಿ.ಎನ್ ನಾಯ್್ಕ ಬೇಡ್ಕಣಿ, ಕೆಪಿಸಿಸಿ ಸದಸ್ಯರಾದ ಸದಾನಂದ ದಬಗಾರ, ಅಜರೆಕರ, ವಿವೇಕ ಹೆಬ್ಬಾರ, ಮಹಿಳಾ ಜಿಲ್ಲಾ ಅಧ್ಯಕ್ಷೆ ಸುಜಾತಾ ಗಾವಂಕರ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು. ಪಕ್ಷದ ವಿವಿಧ ಸ್ಥರಗಳ ಹುದ್ದೆಗೆ ನೇಮಕವಾದವರಿಗೆ ಆದೇಶ ಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net