ಶಾಸಕ ಮಹೇಶ ಟೆಂಗಿನಕಾಯಿ ಜನ್ಮದಿನ ಸಂಭ್ರಮ, ಹಲವು ವಿಧಾಯಕ ಕಾರ್ಯಕ್ರಮ

IMG_20230624_202503_288-1.jpg
Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರ ಜನ್ಮದಿನದ ಪ್ರಯುಕ್ತ ಶನಿವಾರ ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಸೇರಿ ಹಲವು ವಿಧಾಯಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರ್ಥರ್ಪೂಣಗೊಳಿಸಲಾಯಿತು.

ಕ್ಷೇತ್ರದ ಜನರು, ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಶಾಸಕರಿಗೆ ಜನ್ಮದಿನದ ಶುಭಾಶಯ ಕೋರಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದಶಿರ್ಯೂ ಆಗಿರುವ ಮಹೇಶ ಅವರ ಜನ್ಮದಿನ ಸಂಭ್ರಮದಲ್ಲಿ ಭಾಗಿಯಾದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡರು.

ಬೆಳಗ್ಗೆ ಅವರ ಅಭಿಮಾನಿ ಬಳಗದಿಂದ 200 ಸಸಿಗಳನ್ನು ವಿತರಣೆ ಮಾಡಲಾಯಿತು. ಶ್ರೀ ಸಿದ್ಧಾರೂಢ ಮಠದಲ್ಲಿ ಅಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರು ನಂತರ ಗೋಪೂಜೆ ನೆರವೇರಿಸಿದರು.

ಗೋಪನಕೊಪ್ಪದ ಮನೋವಿಕಾಸ ಶಾಲೆ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಯಿತು.
ನಗರದ ಜಿತೂರಿ ಕಣ್ಣಿನ ಆಸ್ಪತ್ರೆಯಲ್ಲಿ ಸುಮಾರು 50 ಜನರ ಉಚಿತ ಕಣ್ಣಿನ ತಪಾಸಣೆ ನಡೆಸಲಾಯಿತು. ಗೋಕುಲ ರಸ್ತೆ ಕ್ಯೂಬಿಕ್ಸ್ ಹೋಟೆಲ್ನಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 160 ಜನರು ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net