ಚನ್ನರಾಯಪಟ್ಟಣ ತಾಲೂಕಿನ ಹಳೇಬೆಳಗೊಳ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಸಿ.ಎನ್.ಬಾಲಕೃಷ್ಣ

IMG-20200626-WA0026.jpg
Published on

ಚನ್ನರಾಯಪಟ್ಟಣ: ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸದೆ ಗ್ರಾಮೀಣ ಪ್ರದೇಶವನ್ನು ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ತಾಲೂಕಿನ ಹಳೇ ಬೆಳಗೊಳ ಗ್ರಾಮದ ಕೆರೆ ಮೈದುಂಬಿ ಹರಿಯುತ್ತಿವ ಹಿನ್ನೆಲೆಯಲ್ಲಿ ಶುಕ್ರವಾರ ಬಾಗಿನ ಅರ್ಪಿಸಿ ಮಾತನಾಡಿ, ಕಳೆದ 15 ವರ್ಷಗಳಿಂದ ಬರಿದಾಗದ್ದ ಕೆರೆಗೆ ಏತನೀರಾವರಿ ಯೋಜನೆಯಡಿ ನೀರು ತುಂಬಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪರಮದ ದೇವರಾಜೇಗೌಡ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪರಮ ಕೃಷ್ಣೇಗೌಡ, ತಾಲೂಕು ಪಂಚಾಯಿತಿ ಸದಸ್ಯ ಗಂಗಾಧರ್, ಮಾಜಿ ಸದಸ್ಯ ಗಣೇಶ್, ಪ್ರಮುಖರಾದ ನಾಗೇಂದ್ರ ಬಾಬು, ಪೂಮಡಿಹಳ್ಳಿ ನಾಗೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net