ಮುಷ್ಕರಕ್ಕೆ ಶಾಸಕ ಸಿಎನ್ ಬಾಲಕೃಷ್ಣ ಬೆಂಬಲ

30 CRP-1A,
ಚನ್ನರಾಯಪಟ್ಟಣ ಪುರಸಭೆ ಕಚೇರಿ ಮುಂಭಾಗ ಪೌರಕಾರ್ಮಿಕರು ನಡೆಸುತ್ತಿರುವ ಪೌರಕಾರ್ಮಿಕರ ಮುಷ್ಕರದ ಸ್ಥಳಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಭೇಟಿ ನೀಡಿ ಬೆಂಬಲ ಸೂಚಿಸಿ ಮನವಿ ಸ್ವೀಕರಿಸಿದರು.
Published on

ಸಿಎಂ, ಸಂಬಂಧಪಟ್ಟ ಸಚಿವರ ಜತೆ ಚರ್ಚಿಸುವ ಭರವಸೆ

ಚನ್ನರಾಯಪಟ್ಟಣ: ತಮ್ಮ ವಿವಿದ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪುರಸಭೆ ಕಚೇರಿ ಮುಂಭಾಗ ಪೌರಕಾರ್ಮಿಕರು ನಡೆಸುತ್ತಿರುವ ಪೌರಕಾರ್ಮಿಕರ ಮುಷ್ಕರ ಸ್ಥಳಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಪೌರ ನೌಕರರ ಅಗತ್ಯ ಬೇಡಿಕೆಗಳು ನ್ಯಾಯಯುತವಾಗಿದೆ. ಸರ್ಕಾರ ಕೂಡಲೇ ಪೌರ ನೌಕರರ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪುರಸಭೆ ಆವರಣದಲ್ಲಿ ಪ್ರತಿಭಟನೆಗೆ ಕುಳಿತಿರುವ ಪೌರಕಾರ್ಮಿಕರು ತಮ್ಮ ದೈನಂದಿನ ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿದ್ದು, ಸರ್ಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು. ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಗರವನ್ನು ಸುಂದರವಾಗಿ ಕಾಣಲು ಘನತ್ಯಾಜ್ಯ ವಿಲೇವಾರಿಗೆ ಪೌರಕಾರ್ಮಿಕರ ಶ್ರಮ ಅತಿಮುಖ್ಯ. ಪೌರ ಕಾರ್ಮಿಕರ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಪೌರಾಡಳಿತ ಸಚಿವರ ಗಮನಕ್ಕೆ ತಂದು ಚರ್ಚಿಸಿ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪಟ್ಟಣದಲ್ಲಿ ಪೌರಕಾರ್ಮಿಕರ ವಸತಿ ಬಡಾವಣೆ ನಿರ್ಮಾಣಕ್ಕಾಗಿ 3.18 ಕುಂಟೆ ಜಾಗವನ್ನು ಕಾಯ್ದಿರಿಸಲಾಗಿದ್ದು ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು

ಟಿಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್.ಅನಿಲ್ ಕುಮಾರ್, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಮುಖ್ಯಾಧಿಕಾರಿ ಆರ್.ಯಶವಂತ್ ಕುಮಾರ್, ಪುರಸಭಾ ಸದಸ್ಯರಾದ ನವೀನ್ ಕುಮಾರ್, ಗಣೇಶ್, ಬನಶಂಕರಿ ರಘು, ಪರಿಸರ ಇಂಜಿನಿಯರ್ ಕಾವ್ಯಶ್ರೀ, ಮುಖಂಡರಾದ ಶಾಮಿಯಾನ ರಘು, ಗಾರೆಕೃಷ್ಣ, ಪೌರಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಯೋಗೇಶ್ ಸಮುದಾಯ ಸಂಘಟನಾಧಿಕಾರಿ ಶಾರದಮ್ಮ, ಪುರಸಭೆಯ ಕಚೇರಿ ಸಿಬ್ಬಂದಿ , ಪೌರಕಾರ್ಮಿಕರು ಹೊರಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net