ಸ್ಪರ್ಧಾತ್ಮಕ ಪರೀಕ್ಷೆಗೆ ಆತ್ಮವಿಶ್ವಾಸ ಮುಖ್ಯ: ಶಾಸಕ ರಾಘವೇಂದ್ರ ಹಿಟ್ನಾಳ ಅಭಿಮತ

COMPITATIVE EXAM
ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ಧಾರವಾಡ ಚಾಣಕ್ಯ ಸಂಸ್ಥೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರವನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಉದ್ಘಾಟಿಸಿದರು. ಅಕಾಡೆಮಿ ನಿರ್ದೇಶಕ ಪ್ರದೀಪ್ ಗುಡ್ಡದ, ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ, ಸಂಪನ್ಮೂಲ ವ್ಯಕ್ತಿ ರಾಜಕುಮಾರ ಡಿ.ಎಸ್., ಇದ್ದರು.
Published on

ಕೊಪ್ಪಳ: ಆತ್ಮವಿಶ್ವಾಸವಿದ್ದರೆ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬಹುದು. ಪ್ರತಿಯೊಬ್ಬರೂ ಯಶಸ್ಸು ಸಾಧಿಸಲು ಪ್ರಯತ್ನಿಸಬೇಕೆಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಭವನದಲ್ಲಿ ಧಾರವಾಡ ಚಾಣಕ್ಯ ಸಂಸ್ಥೆ ಶನಿವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ವಿದ್ಯಾರ್ಥಿಗಳು ಧಾರವಾಡ ಚಾಣಕ್ಯ ಸಂಸ್ಥೆಯಲ್ಲಿ ತರಬೇತಿ ಪಡೆದರೆ ಶೇ.50 ಸ್ಫರ್ಧಾತ್ಮಕ ಪರೀಕ್ಷೆಯ ಶುಲ್ಕವನ್ನು ನಾನೇ ಭರಿಸುತ್ತೇನೆ ಎಂದು ಭರವಸೆ ನೀಡಿದರು.

ಅಕಾಡೆಮಿ ನಿರ್ದೇಶಕ ಪ್ರದೀಪ್ ಗುಡ್ಡದ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ? ಅವುಗಳ ಪಠ್ಯಕ್ರಮ, ಅರ್ಹತೆ ಇತ್ಯಾದಿ ಪ್ರಮುಖ ವಿಷಯಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ ಮಾತನಾಡಿದರು. ಇತಿಹಾಸ ವಿಷಯದ ಸಂಪನ್ಮೂಲ ವ್ಯಕ್ತಿ ರಾಜಕುಮಾರ ಡಿ.ಎಸ್., ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ್, ಪ್ರಮುಖರಾದ ಕೃಷ್ಣಾರೆಡ್ಡಿ ಜಿ., ಐಕ್ಯೂಎಸಿ ಸಂಚಾಲಕಿ ಡಾ.ವಾರುಣಿ, ಪ್ರಾಧ್ಯಾಪಕಿ ರಶ್ಮಿ, ಅಕಾಡೆಮಿ ಸಂಚಾಲಕ ಬಿ.ನಾಗಲಿಂಗ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net