ಹಾಸ್ಟೆಲ್‌ಗೆ ಶಾಸಕ ಕದಲೂರು ಉದಯ್ ಭೇಟಿ

21KMD-1
Published on

ಕೆ.ಎಂ.ದೊಡ್ಡಿ: ಸಮೀಪದ ಗುಡಿಗೆರೆ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಡಿ. ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಕದಲೂರು ಉದಯ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾರ್ಥಿನಿಲಯದ ಮೇಲ್ವಿಚಾರಕರ ಜತೆಗೂಡಿ ಹಾಸ್ಟೆಲ್ ಕೊಠಡಿಗಳು, ಅಡುಗೆ ಕೋಣೆ, ದಾಸ್ತಾನು ಕೊಠಡಿಗಳು ಮತ್ತು ವಿದ್ಯಾರ್ಥಿಗಳ ವಸತಿ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದ ಅವರು, ಹಾಸ್ಟೆಲ್ ಆವರಣ ಹಾಗೂ ಕೊಠಡಿಗಳ ಸ್ವಚ್ಛತೆ ಹಾಗೂ ಸೌಲಭ್ಯಗಳ ಬಗ್ಗೆ ಅವಲೋಕಿಸಿದರು, ನಂತರ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿ ನಿಲಯದಲ್ಲಿ ಮೂಲಸೌಕರ್ಯಗಳನ್ನು ಸಮಪರ್ಕವಾಗಿ ತಲುಪಿಸುವಂತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಒದಗಿಸುವಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ವಿದ್ಯಾರ್ಥಿ ನಿಲಯದ ಆವರಣದಲ್ಲಿ ಉತ್ತಮ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ ,ಅಧಿಕಾರಿಗಳು ಹಾಸ್ಟೆಲ್‌ನಲ್ಲಿ ನಿರ್ವಹಣೆ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ ಅಭಿವೃದ್ಧಿಗೆ ಅಗತ್ಯವಿರುವ ಸೇವೆಗಳ ಪಟ್ಟಿ ನೀಡಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸುನೀಲ್ ಕುಮಾರ್, ಮಾದೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net