ಮತಗಳ್ಳತನದಿಂದ ಅಧಿಕಾರದಲ್ಲಿದೆ ಬಿಜೆಪಿ

hnl congres oct 20
Published on

ಹೊನ್ನಾಳಿ: ಬಿಜೆಪಿ ಮತಗಳ್ಳತನದ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ ಮಾಡಿ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಆರೋಪಿಸಿದರು.

ಪಟ್ಟಣದಲ್ಲಿ ಸೋಮವಾರ ತಾಲೂಕು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಮತಗಳ್ಳತನದ ವಿರುದ್ಧ ಪ್ರತಿಭಟನೆ ಮತ್ತು ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.

ಇದು ದೇಶದ ಜನತೆಯ ನಂಬಿಕೆಗೆ ಮಾಡಿದ ಅಪಚಾರವಾಗಿದೆ. ಪ್ರತಿ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನಜಾಗೃತಿ ಮೂಡಿಸಿ ಸಹಿ ಸಂಗ್ರಹ ಮಾಡಿ, ಜಿಲ್ಲೆಯಲ್ಲಿಯೇ ಹೊನ್ನಾಳಿ ಕ್ಷೇತ್ರ ಪ್ರಥಮ ಸ್ಥಾನದಲ್ಲಿರಬೇಕು. ಅದಕ್ಕಾಗಿ ನಾವೆಲ್ಲ ಶ್ರಮಿಸೋಣ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಮತಗಳ್ಳತನ ಮತ್ತು ಸುಳ್ಳು ಭರವಸೆಗಳಿಂದ ಬಿಜೆಪಿಯ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈಗಾಗಲೇ ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು ಮತಗಳ್ಳತನದ ವಿರುದ್ಧ ಹೋರಾಟ ಆರಂಭಿಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್ ಸಹಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕನಿಷ್ಠ 2 ಲಕ್ಷ ಹಾಗೂ ತಾಲೂಕಿನಲ್ಲಿ ಕನಿಷ್ಠ 25 ಸಾವಿರ ಸಹಿ ಸಂಗ್ರಹ ಮಾಡಬೇಕು. ಇದಕ್ಕಾಗಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ತಾಲೂಕಾಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೇಹಳ್ಳಿ ಬ್ಲಾಕ್ ಅಧ್ಯಕ್ಷ ಆರ್. ನಾಗಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ. ವಿಶ್ವನಾಥ್, ಎಚ್.ಎ. ಉಮಾಪತಿ, ಡಾ.ಎಲ್. ಈಶ್ವರ ನಾಯ್ಕ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ರವೀಶ್, ಆಶಾ, ಉಷಾ ಮಾತನಾಡಿದರು.

ಪುರಸಭೆ ಅಧ್ಯಕ್ಷ ಮೈಲಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಮನೋಜ್ ವಾಲಜ್ಜಿ, ಮಧುಗೌಡ, ಸಾಸ್ವೇಹಳ್ಳಿ ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕುಳಗಟ್ಟೆ ಶೇಖರಪ್ಪ, ವಿಜೇಂದ್ರಪ್ಪ, ಬೆನಕನಹಳ್ಳಿ ವೀರಣ್ಣ, ರೈತ ಮುಖಂಡ ಜಗದೀಶ್, ಎಚ್.ಬಿ. ಅಣ್ಣಪ್ಬ ಸೇರಿ ಅನೇಕ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net