ವಾರ್ಡ್‌ಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

ವಾರ್ಡ್‌ಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ
Published on

ನಂಜನಗೂಡು: ನಂಜನಗೂಡು ನಗರಸಭಾ ವ್ಯಾಪ್ತಿಯ ಕೆಲವು ವಾರ್ಡ್‌ಗಳಿಗೆ ಸೋಮವಾರ ಬೆಳಗ್ಗೆ ಶಾಸಕ ದರ್ಶನ್ ಧ್ರುವನಾರಾಯಣ್ ದಿಢೀರ್ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ನಗರದ ಶ್ರೀ ರಾಂಪುರ, ಶಂಕರಪುರ, ನೀಲಕಂಠನಗರ ಬಡಾವಣೆಗಳಿಗೆ ಭೇಟಿ ನೀಡಿದರು. ವಾರ್ಡ್‌ಗಳಲ್ಲಿ ಚರಂಡಿ ಸಮಸ್ಯೆ, ಯುಜಿಡಿ, ಮನೆ ಖಾತೆ, ಕುಡಿಯುವ ನೀರಿನ ಬಿಲ್‌ಗಳ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದವು.

ಪಾರ್ಕ್ ಒಳ ಆವರಣದಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಭಿವೃದ್ಧಿಯಾಗದ ಗ್ರಂಥಾಲಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ವಾರ್ಡ್‌ಗಳಲ್ಲಿರುವ ಸಮಸ್ಯೆಗಳನ್ನು ಬಗೆ ಹರಿಸಲು ಶೀಘ್ರ ಕ್ರಮವಹಿಸುವುದಾಗಿ ತಿಳಿಸಿದರು. ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು.

ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಹಾನಾಭಾನು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಂಜುಂಡಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net