

ಬೆಳಗಾವಿ: ಸ್ಮಾರ್ಟ್ ಸಿಟಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಫ್ಲೇಓವರ್ ನಿರ್ಮಾಣ ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ ಶಾಸಕ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆ ನಡೆಸಿದರು.
ಬಳಿಕ ಗಾಂಧೀನಗರ, ಮಹಾಂತೇಶ ನಗರದ ಬಳಿ ಸ್ಥಳ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.