ಸೌಲಭ್ಯ ಬಳಸಿಕೊಂಡು ಸಾಧನೆ ಮಾಡಿ: ಶಾಸಕ ರವಿಕುಮಾರ್ ಗಣಿಗ ಸಲಹೆ

MLA distributed laptops to students mandya
Published on

ಮಂಡ್ಯ: ಕಟ್ಟಡ ಕಾರ್ಮಿಕರು ಶ್ರಮಜೀವಿಗಳು. ಆದರೂ ಎಷ್ಟೇ ಕಷ್ಟವಾದರೂ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾರೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಬಳಸಿಕೊಂಡು ಸಾಧನೆ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ರವಿಕುಮಾರ್ ಗಣಿಗ ಕಿವಿಮಾತು ಹೇಳಿದರು.

ನಗರದ ಕರ್ನಾಟಕ ಸಂಘದ ಕೆ.ವಿ.ಶತಮಾನೋತ್ಸವ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಪ್ರಥಮ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಂಗಳವಾರ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ಪಾಲಕರು ತಮಗೆ ಎಷ್ಟೇ ನೋವಿದ್ದರೂ ಮಕ್ಕಳಿಗಾಗಿಯೇ ಬದುಕುತ್ತಿರುತ್ತಾರೆ. ಜತೆಗೆ ಉತ್ತಮ ಸಾಧನೆ ಮಾಡಬೇಕೆಂಬ ಆಸೆ ಹೊಂದಿರುತ್ತಾರೆ. ಅದಕ್ಕಾಗಿ ಹಗಲಿರುಳು ದುಡಿಯುತ್ತಾರೆ. ಈ ಹಿನ್ನೆಲೆಯಲ್ಲಿ ಮಕ್ಕಳು ಉನ್ನತ ಸಾಧನೆ ಮಾಡುವ ಗುರಿಯಿಟ್ಟುಕೊಂಡು ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್‌ಕುಮಾರ್ ಮಾತನಾಡಿ, ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಸಿಗುತ್ತಿದೆ. ಅದರಂತೆ ಈ ಬಾರಿ 35 ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ನಮ್ಮ ಇಲಾಖೆಯಿಂದ ಉತ್ತಮ ಸೌಲಭ್ಯ ಸಿಗುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು. ನಮ್ಮಲ್ಲಿ ಸಿಗುವ ಸೌಲಭ್ಯಗಳಿಗೆ ನೇರವಾಗಿ ಕಚೇರಿ ಸಂಪರ್ಕಿಸಬೇಕು ಎಂದರು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಯೋಜನಾ ನಿರ್ದೇಶಕ ಪ್ರಭಾಕರ್, ಕಾರ್ಮಿಕ ನಿರೀಕ್ಷಕರಾದ ಸ್ವಾಮಿ, ನಾಗರತ್ನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net