ರೈತರಿಗೆ ಮಧ್ಯಂತರ ಪರಿಹಾರ ನೀಡಲಿ, ಕಂದಾಯ ಸಚಿವರ ಕಾರ್ಯದರ್ಶಿಗೆ ಶಾಸಕ ಡಾ. ಚಂದ್ರು ಲಮಾಣಿ ಮನವಿ

25 Srt 02- mla lamani
Published on

ಶಿರಹಟ್ಟಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮೂರು ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ನಷ್ಟವಾಗಿದೆ. ಹೀಗಾಗಿ ರೈತರಿಗೆ ಕೂಡಲೇ ಪರಿಹಾರ ಘೊಷಣೆ ಮಾಡಿ ಎಂದು ಕಂದಾಯ ಸಚಿವರ ಕಾರ್ಯದರ್ಶಿಗೆ ಶಾಸಕ ಡಾ. ಚಂದ್ರು ಲಮಾಣಿ ಮನವಿ ಸಲ್ಲಿಸಿದರು.

ಶಿರಹಟ್ಟಿ, ಮುಂಡರಗಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಅತಿಯಾದ ಮಳೆಯಾಗಿದ್ದು, ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಈ ಹಿಂದೆ ಬರ ಬಂದ ಹಿನ್ನೆಲೆಯಲ್ಲಿ ಬೆಳೆ ಬೆಳೆಯಲಾರದೆ ನಷ್ಟ ಅನುಭವಿಸಿದ್ದರು. ಈ ಬಾರಿ ನೆರೆ ಉಂಟಾಗಿ ಜೀವನ ನಡೆಸಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದಾರೆ. ಕೂಡಲೇ ಸರ್ಕಾರದಿಂದ ಮಧ್ಯಂತರ ಪರಿಹಾರ ನೀಡಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net