

ಮೈಸೂರು: ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬುದು ಬಹಳ ಮುಖ್ಯ. ನಮ್ಮ ಸಮಾಜದ ನೌಕರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಎಂದು ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಸಮಾರಂಭದಲ್ಲಿ ಪ್ರಸ್ತಾಪಿಸಿದ್ದಾರೆ.
ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಎಂಜಿ ರಸ್ತೆಯ ಹಳೇ ಜೆಎಸ್‌ಎಸ್ ಆಸ್ಪತ್ರೆ ಕಟ್ಟಡದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದವರಿಗೆ ಸನ್ಮಾನ, ಸುತ್ತೂರು ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಇದಕ್ಕೆ ಸಾಕಷ್ಟು ಕಾರಣಗಳು ಇವೆ, ಅದನ್ನು ಹೇಳುತ್ತಾ ಹೋದರೆ ಸಾಕಷ್ಟು ಸಮಯ ಬೇಕಾಗುತ್ತದೆ. ಮೈಸೂರು ಭಾಗದಲ್ಲಿ ನಾನೊಬ್ಬನೇ ಲಿಂಗಾಯ ಸಮುದಾಯದ ಶಾಸಕ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವರುಣ, ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಹನೂರಿನಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಲಾಗಿತ್ತು. ಆ ಮೂರು ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಅಭ್ಯರ್ಥಿಗಳು ಸೋಲು ಕಾಣಲು ನಮ್ಮ ಸಮುದಾಯದವರೇ ಕಾರಣ. ಈ ಬಗ್ಗೆ ಮಾತನಾಡುತ್ತಾ ಹೋದರೆ ತುಂಬಾ ಸಮಯ ಬೇಕಾಗುತ್ತದೆ. ಆ ಬಗ್ಗೆ ಹೇಳಿಯೂ ಪ್ರಯೋಜನವಿಲ್ಲ. ಆಗಿದ್ದು ಆಗಿ ಹೋಗಿದೆ, ಮುಂದೆಯಾದರೂ ಒಗ್ಗಟ್ಟಿನಿಂದ ನಮ್ಮ ಸಮುದಾಯ ಇರಬೇಕು ಎಂದರು.