ಮೂಲಸೌಕರ್ಯ ವ್ಯವಸ್ಥೆಗೆ ಶಾಸಕ ಗಂಟಿಹೊಳೆ ಸೂಚನೆ

gantihole
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಕೃತಿಕ ಅನಾಹುತ ಉಂಟಾಗಿರುವ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
Published on

ಬೈಂದೂರು: ನಿರಂತರ ಗಾಳಿ ಮಳೆಯಿಂದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಕೃತಿಕ ಅನಾಹುತ ಉಂಟಾಗಿರುವ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ತುರ್ತು ಪರಿಹಾರ ಹಾಗೂ ಮೂಲಸೌಕರ್ಯದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಡೇರಿ ಕಿರುಬಂದರು ಬ್ರೇಕ್ ವಾಟರ್ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಉಪ್ಪುಂದ ಮಾಡಿಕಲ್ ಶಾಲೆ ಕಟ್ಟಡ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾರಪತಿ ಭಾಗದಲ್ಲಿ ಉಂಟಾಗಿರುವ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೊಡೇರಿಗೆ ಭೇಟಿ

ಆಕಸ್ಮಿಕವಾಗಿ ಬೆಂಕಿ ಬಿದ್ದು ಹಾನಿಗೀಡಾಸ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ದಿನಸಿ ಅಂಗಡಿಗೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮಗಳ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿದರು.

ಕಡಲ್ಕೊರೆತ ವೀಕ್ಷಣೆ

ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಕಡಲು ತೀರದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು

ಗುಜ್ಜಾಡಿಯಲ್ಲಿ ಪರಿಶೀಲನೆ

ಭಾರಿ ಗಾಳಿ ಮಳೆಗೆ ಗುಜ್ಜಾಡಿ ಗ್ರಾಮದ ಉದಯ ಅವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net