ಸಹಿ ಸಂಗ್ರಹಕ್ಕೆ ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಚಾಲನೆ

GPT-4
ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗಣೇಶ ಪ್ರಸಾದ್ ಸಹಿಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
Published on

ಗುಂಡ್ಲುಪೇಟೆ: ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚಾಗಿ ಕಾರ್ಯಕರ್ತರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ ಪ್ರಸಾದ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ವೋಟ್ ಚೋರಿ ಅಭಿಯಾನದಲ್ಲಿ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿ, ಬಿಜೆಪಿಯಲ್ಲಿ ಕಾರ್ಯಕರ್ತರನ್ನು ಸರಿಯಾಗಿ ಗಮನಿಸದೆ ಇರುವುದರಿಂದ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಭೀಮನಬೀಡು ಗ್ರಾಮದಲ್ಲಿ ಬಿಜೆಪಿಯಲ್ಲಿ ಅಸಮಾಧಾನಗೊಂಡಿದ್ದ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಸಭೆಗಳಿಗೆ ಮತ್ತು ಬಿಜೆಪಿ ಪಕ್ಷಕ್ಕೆ ಸಂಬಂಧಪಟ್ಟ ಸಭೆಗಳಿಗೆ ನಮ್ಮನ್ನು ಆಹ್ವಾನಿಸುತ್ತಿಲ್ಲ ಎಂದು ಕಾರ್ಯಕರ್ತರು ಬೇಸರ ವರಹಾಕಿದ್ದಾರೆ. ಅವರೇ ಬಂದು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೆರೆ ತುಂಬಿಸುವ ಯೋಜನೆ ಅಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ರೈತರನ್ನು ಕಡೆಗಣಿಸುತ್ತಿಲ್ಲ. ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಯಂತ್ರದ ತಾಂತ್ರಿಕ ದೋಷದಿಂದ ತೊಂದರೆಯಾಗಿದೆ. ಸಣ್ಣಪುಟ್ಟ ರಿಪೇರಿ ಬಂದರೆ ಸರಿಪಡಿಸಬಹುದು.

ಆದರೆ ಹೀಗೆ ಬಂದಿರುವ ಯಂತ್ರವನ್ನು ಸರಿಪಡಿಸಲು ಅದರದೇ ಆದ ಉಪಕರಣಗಳು ಸಿಗದೆ ಇರುವುದರಿಂದ ತಡವಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತಾಗಿ ಸರಿಪಡಿಸಲು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net