ಶಾಸಕ ಎಚ್​.ವೈ. ಮೇಟಿ ಜನ್ಮದಿನ ಅರ್ಥಪೂರ್ಣ ಆಚರಣೆ

MLA H.Y. Matey's birthday is a meaningful celebration
Published on

ಬಾಗಲಕೋಟೆ: ಮತೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಹಾಗೂ ಬಿಟಿಡಿಎ ಅಧ್ಯ ಎಚ್​.ವೈ. ಮೇಟಿ ಭೂಮಿ ಪೂಜೆ ನೆರವೇರಿಸಿದರು. ನವನಗರದ ಸೆಕ್ಟರ್​ ನಂ.7ರಲ್ಲಿ ಹಮ್ಮಿಕೊಂಡ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಲಾನುಭವಿಗಳಿಗೆ ಸೌಲಭ್ಯ ವಿತರಿಸಿದರು.

ನಂತರ ಶಾಸಕ ಎಚ್​.ವೈ. ಮೇಟಿ ಮಾತನಾಡಿ, ನವನಗರದ ಯುನಿಟ್​&1 ಮತ್ತು 2ರಲ್ಲಿ 18.48 ಕೋಟಿ ರೂ.ಗಳ ವಿವಿಧ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಲ್ಲದೇ 7 ಜನ ವಿಕಲಚೇತನರಿಗೆ ತ್ರಿಚಕ್ರವಾಹನ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಆಯ್ಕೆಯಾದ 11 ಲಾನುಭವಿಗಳಿಗೆ ಆದೇಶ ಪತ್ರ, ಕೌಶಲ ಅಭಿವೃದ್ಧಿ ಯೋಜನೆಯಡಿ ಸ್ವ&ಉದ್ಯೋಗ ಮಾಡಲು 8 ಮಹಿಳೆಯರಿಗೆ ಹೊಲಿಗೆ ಯಂತ್ರದ ಕಿಟ್​, ಎಸ್​ಬಿಎಂ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಐವರಿಗೆ ಕಾಮಗಾರಿ ಆದೇಶ ಪತ್ರ, 5 ಜನ ಲಾನುಭವಿಗಳಿಗೆ ಕೃಷಿ ಸಲಕರಣೆಗಳ ವಿತರಣೆ ಹಾಗೂ 16 ಜನ ಲಾನುಭವಿಗಳಿಗೆ ಸಮುದಾಯ ಬಂಡವಾಳ ನಿಧಿ ಸೌಲಭ್ಯವನ್ನು ವಿತರಿಸಲಾಗಿದೆ. ಮುಖ್ಯಮಂತ್ರಿಗಳ ಅಮತ ನಗರೋತ್ಥಾನ ಯೋಜನೆ ಹಂತ&4ರಡಿ ಇಬ್ಬರು ಲಾನುಭವಿಗಳಿಗೆ ಹೊಲಿಗೆ ಯಂತ್ರ, ಸೋಲಾರ ಲೈಟ್​ ವಿತರಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಸಂಗಪ್ಪ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿದರು. ಆರೋಗ್ಯ ಇಲಾಖೆಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್​, ಬುಡಾ ಅಧ್ಯ ಅಬ್ದುಲ್​ರಜಾಕ ಬೇನೂರ, ಜಿ.ಪಂ. ಉಪ ಕಾರ್ಯದರ್ಶಿ ಎನ್​.ವೈ. ಬಸರಿಗಿಡದ, ಬಿಡಿಸಿಸಿ ಬ್ಯಾಂಕ್​ನ ಅಧ್ಯ ಅಜಯಕುಮಾರ ಸರನಾಯಕ, ಬಸವೇಶ್ವರ ಬ್ಯಾಂಕಿನ ಅಧ್ಯ ಪ್ರಕಾಶ ತಪಶೆಟ್ಟಿ ಮತ್ತಿತರರು ಇದ್ದರು.

ಬಾಗಲಕೋಟೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ಶಾಸಕ ಎಚ್​.ವೈ.ಮೇಟಿ ವಿತರಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಎಸ್ಪಿ ಸಿದ್ಧಾರ್ಥ ಗೋಯಲ್​ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net