ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಸಿ

Untitled design 2
Published on

ಮಾನ್ವಿ: ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿವೆಯೇ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ಶಾಸಕರ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಒಟ್ಟು 39,580 ಫಲಾನುಭವಿಗಳಿಗೆ 11 ತಿಂಗಳು 2 ಸಾವಿರ ರೂ. ಪಾವತಿಸಲಾಗಿದೆ. ಯುವನಿಧಿ ಅಡಿಯಲ್ಲಿ ಡಿ.2023 ರಿಂದ ನ.2024 ರ ವರೆಗೆ 32,912 ಪದವಿಧರ ಹಾಗೂ 179 ಡಿಪ್ಲೊಮಾ ವಿದ್ಯಾರ್ಥಿಗಳು ಸೌಲಭ್ಯ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 21,847 ರಲ್ಲಿ 14,744 ಫಲಾನುಭವಿಗಳು ಉಚಿತ ವಿದ್ಯುತ್ ಯೋಜನೆಯಡಿ ಲಾಭ ಪಡೆದಿದ್ದು, ಶಕ್ತಿ ಯೋಜನೆಯಡಿ 49,59,885 ಮಹಿಳಾ ಫಲಾಭವಿಗಳು ಕೆಎಸ್‌ಅರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ ಎಂದರು. ತಾಲೂಕಿನಲ್ಲಿ ಒಟ್ಟು 96,815 ಪಡಿತರ ಚೀಟಿಗಳಿದ್ದು, ಅದರಲ್ಲಿ 93,765 ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ಜಮಾ ಮಾಡಲಾಗಿದೆ. ಗ್ಯಾರಂಟಿ ಯೋಜನೆ ಇನ್ನೂ ತಲುಪದಿರುವ ಫಲಾನುಭವಿಗಳ ಅರ್ಜಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ರಾಜು ಪಿರಂಗಿ, ತಾಪಂ ಇಒ ಖಾಲೀದ್ ಅಹಮದ್, ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಿ.ಕೆ.ಅಮರೇಶಪ್ಪ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಗಪೂರಸಾಬ್, ಜೆಸ್ಕಾಂ ಎಇಇ ವೈದ್ಯನಾಥಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net