ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ

Nagaraj Maski Web
Published on

ರಾಯಚೂರು: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಐದನೇ ಬಾರಿಗೆ ಶಾಸಕರಾಗಿರುವ ಸಿಂಧನೂರಿನ ಹಂಪನಗೌಡ ಬಾದರ್ಲಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡುವಂತೆ ರಾಯಚೂರು ಜಿಲ್ಲೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜ ಮಸ್ಕಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾಗಿರುವ ಹಂಪನಗೌಡ ಬಾದರ್ಲಿ ಅಭಿವೃದ್ಧಿ ಚಿಂತನೆ ಹೊಂದಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬಾದರ್ಲಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಗೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಹಲವು ವರ್ಷಗಳಿಂದ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದ್ದು, ಈ ಬಾರಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಬಾದರ್ಲಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ನ್ಯಾಯ ಒದಗಿಸಬೇಕು ಎಂದು ನಾಗರಾಜ ಮಸ್ಕಿ ಆಗ್ರಹಿಸಿದರು. ಒಕ್ಕೂಟದ ಉಪಾಧ್ಯಕ್ಷ ಎಸ್.ಎಲ್.ಕೇಶವರೆಡ್ಡಿ, ಸಹ ಕಾರ್ಯದರ್ಶಿ ಟಿ.ಬಸವರಾಜ, ಪದಾಧಿಕಾರಿಗಳಾದ ರವಿ ಗೋನಾಳ್, ಶಂಕರಲಿಂಗಯ್ಯ ಸ್ವಾಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net