ಸಹಕಾರಿ ಸಂಘಗಳ ಅಭಿವೃದ್ಧಿಗೆ ಅಗತ್ಯ ನೆರವು, ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

SAHAKARI
ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್‌ನಲ್ಲಿ ಸಾಲಗುಂದಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಶಾಸಕ ವೆಂಕಟರಾವ ನಾಡಗೌಡ ಉದ್ಘಾಟಿಸಿದರು. ಶಾಸಕ ಹಂಪನಗೌಡ ಬಾದರ್ಲಿ, ಆರ್‌ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಐ.ಎಸ್.ಗಿರಡ್ಡಿ, ಸಾಲಗುಂದಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಅಧ್ಯಕ್ಷ ಶಾಕೀರ್ ಹುಸೇನ್, ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ, ನಿರ್ದೇಶಕರಾದ ಪಂಪನಗೌಡ ಬಾದರ್ಲಿ ಇದ್ದರು.
Published on

ಸಿಂಧನೂರು: ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಹಕಾರಿ ಸಂಘಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ತಾಲೂಕಿನ ಬೂದಿವಾಳ ಕ್ಯಾಂಪ್‌ನಲ್ಲಿ ಸಾಲಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಹಮ್ಮಿಕೊಂಡಿದ್ದ ನೂತನ ಗೋದಾಮು ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದರು.

ಸಹಕಾರಿಗಳಿಂದ ರೈತಾಪಿ ವರ್ಗಕ್ಕೆ ತುಂಬಾ ಅನುಕೂಲವಾಗುತ್ತಿದೆ. ಸರ್ಕಾರವು ಮುಂದಿನ ದಿನಗಳಲ್ಲಿ ಸಹಕಾರಿಗಳಿಗೆ ಹೆಚ್ಚಿನ ನೆರವು ನೀಡಲಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಇರುವುದರಿಂದ ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು.

ಮಾಜಿ ಶಾಸಕ ವೆಂಕಟರಾವ ನಾಡಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರಿ ಬೆಳವಣಿಗೆ ರೈತರಿಂದ ಸಾಧ್ಯವಾಗಲಿದೆ. ಪಡೆದ ಸಾಲವನ್ನು ಅವದಿಯೊಳಗೆ ಪೂರ್ಣಗೊಳಿಸಿ, ಮರು ಸಾಲ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.

ಆರ್‌ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಐ.ಎಸ್.ಗಿರಡ್ಡಿ, ಸಾಲಗುಂದಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಅಧ್ಯಕ್ಷ ಶಾಕೀರ್ ಹುಸೇನ್ ಅಧ್ಯಕ್ಷತೆವಹಿಸಿ ಮಾತನಾಡಿದರು.

ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್ ತೋರಣದಿನ್ನಿ, ನಿರ್ದೇಶಕರಾದ ಪಂಪನಗೌಡ ಬಾದರ್ಲಿ, ಸೋಮನಗೌಡ ಬಾದರ್ಲಿ, ಸೋಮಲಾಪುರ ಗ್ರಾಪಂ ಅಧ್ಯಕ್ಷೆ ರೇಣುಕಮ್ಮ ಹುಸೇನಪ್ಪ, ಸಾಲಗುಂದಾ ಸಹಕಾರಿ ಉಪಾಧ್ಯಕ್ಷ ಅಮರೇಶ ಅಬಕಾರಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ, ತಾಲೂಕು ಸಹಕಾರಿ ಅಭಿವೃದ್ಧಿ ಅಧಿಕಾರಿ ಹಿರೋಜಿ, ಆರ್‌ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಶರಣಪ್ಪ ಹಳೇಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net