ವಿದ್ಯಾರ್ಥಿಗಳಿಗೆ ಗುಣಮಟ್ಟ ಚಿಕಿತ್ಸೆ ನೀಡಿ

background (4)
ಮಾನ್ವಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ಹಂಪಯ್ಯನಾಯಕ ಭೇಟಿ ನೀಡಿ ವಿದ್ಯಾರ್ಥಿಯ ಆರೋಗ್ಯವನ್ನು ವಿಚಾರಿಸಿದರು. ತಾಲೂಕಾ ಆರೋಗ್ಯಾಧಿಕಾರಿ ಡಾ.ಶರಣಬಸವಪಾಟೀಲ, ತಹಸೀಲ್ದಾರ್ ರಾಜು ಪಿರಂಗಿ. ತಾಪಂ ಇಒ ಖಾಲಿದ್‌ಅಹಮ್ಮದ್ ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಶರಣಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಹೇಶ ಪೋತ್ತೆದಾರ್ ಇನ್ನಿತರರಿದ್ದರು.
Published on

ಮಾನ್ವಿ: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಶಾಸಕ ಹಂಪಯ್ಯನಾಯಕ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಲಿ

ಭಾನುವಾರ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆಹಾರ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ತೀವ್ರವಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯಲ್ಲಮ್ಮ ಹಾಗೂ ಶ್ರೀದೇವಿ ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳಿಬ್ಬರು ಚೇತರಿಸಿ ಕೊಳ್ಳುತ್ತಿದ್ದಾರೆ ಎಂದು ಶಾಸಕ ಹಂಪಯ್ಯ ನಾಯಕ ತಿಳಿಸಿದರು.

ಅಧಿಕಾರಿಗಳು ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿ, ಆಹಾರದ ಗುಣಮಟ್ಟವನ್ನು ಪರೀಕ್ಷೆ ಮಾಡಿದಾಗ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ನಿಲಯಗಳಲ್ಲಿ ಸಮಸ್ಯೆ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟ ಚಿಕಿತ್ಸೆ ನೀಡಲು ತಾಲೂಕಾ ಆರೋಗ್ಯಾಧಿಕಾರಿ ಡಾ.ಶರಣಬಸವಪಾಟೀಲ್ಗೆ ಸೂಚಿಸಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ, ತಾಪ ಪಂಗಡ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ ಇಂಗಳದಾಳ್, ಪಿಐ ವೀರಭದ್ರಯ್ಯ ಹಿರೇಮಠ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net