ವಸತಿ ನಿಲಯಕ್ಕೆ ಶಾಸಕ ಹೆಬ್ಬಾರ್ ದಿಢೀರ್ ಭೇಟಿ

Hebbar Hostel Visit
Published on

ಯಲ್ಲಾಪುರ: ಪಟ್ಟಣದ ಕಾಳಮ್ಮ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಸೋಮವಾರ ದಿಢೀರ್ ಭೇಟಿ, ಅಲ್ಲಿನ ಅವ್ಯವಸ್ಥೆಯ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಸತಿ ನಿಲಯದಲ್ಲಿ ಅವ್ಯವಸ್ಥೆ ಕುರಿತು ಪಾಲಕರ ದೂರಿನ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿದ ಹೆಬ್ಬಾರ್, ಸ್ವಚ್ಛತೆ, ಊಟ, ತಿಂಡಿಯ ವ್ಯವಸ್ಥೆ, ಸಿಸಿಟಿವಿ ಸ್ಥಿತಿ, ವಿದ್ಯಾರ್ಥಿನಿಯರ ಸುರಕ್ಷತೆಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು.

ಸಮರ್ಪಕವಾಗಿ ಊಟ ನೀಡುತ್ತಿಲ್ಲ, ಮೂಲಸೌಕರ್ಯಗಳ ಕೊರತೆ ಇದೆ ಎಂದು ವಿದ್ಯಾರ್ಥಿನಿಯರು ಶಾಸಕರಲ್ಲಿ ದೂರಿದರು. ಈ ವೇಳೆ ನಿಲಯದ ಮೇಲ್ವಿಚಾರಕಿ ಬಾಯಿ ನಾಗಪ್ಪಗೌಡ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಬಡಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸೌಲಭ್ಯಗಳನ್ನು ನೀಡುತ್ತಿದೆ. ಅದನ್ನು ಮಕ್ಕಳಿಗೆ ತಲುಪಿಸುವ, ಸರಿಯಾಗಿ ಮಕ್ಕಳನ್ನು ನೋಡಿಕೊಳ್ಳುವ ಹೊಣೆ ನಿಭಾಯಿಸಲು ಸಾಧ್ಯವಾಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ದೂರು ಕೇಳಿಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net