ವೀರಶೈವ ಸಮುದಾಯದ ಬೇಡಿಕೆ ಈಡೇರಿಸಲಯ ಯತ್ನ

04arsph3ep,,,
Published on

ಅರಸೀಕೆರೆ: ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ನಗರದ ಹೊರವಲಯದಲ್ಲಿರುವ ಖಾಸಗಿ ಸಮುದಾಯ ಭವನದಲ್ಲಿ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯಿತ ಸಮುದಾಯದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಲ್ಲದೇ ಗೀಜಿಹಳ್ಳಿ ಗ್ರಾಮದ ಬಳಿ ಸರ್ಕಾರದಿಂದ ಮಂಜೂರಾಗಿರುವ ರುದ್ರಭೂಮಿ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡಲಿದ್ದೇನೆ. ಯಗಚಿ ನದಿ ಮೂಲದಿಂದ ಸುಕ್ಷೇತ್ರ ಯಾದಾಪರ ಜೇನುಕಲ್ ಸಿದ್ದೇಶ್ವರ ಸ್ವಾಮಿ ಸನ್ನಿಧಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಕಾಮಗಾರಿ ಚಾಲನೆ ಪಡೆಯಲಿದೆ ಎಂದರು. 2008ರ ವಿಧಾನಸಭಾ ಚುನಾವಣೆಯಿಂದಲೂ ವೀರಶೈವ ಲಿಂಗಾಯಿತ ಸಮಾಜ ಗಟ್ಟಿ ಬಡೆಯಂತೆ ನನ್ನ ಜತೆಗಿದೆ ಎನ್ನುವುದನ್ನು ಎಂದಿಗೂ ಮರೆಯುವುದಿಲ್ಲ.ಲಿಂಗಾಯಿತ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net