

-ಅ.19ರಂದು 7 ಸ್ಥಾನಕ್ಕೆಚುನಾವಣೆ ನಡೆಯಲಿದೆ
ಬೆಳಗಾವಿ: ಇಲ್ಲಿನ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ ಆಡಳಿತ.ಮಂಡಳಿ ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ಜಾರಕಿಹೊಳಿ, ಜೊಲ್ಲೆ ಬಣದ 7 ಹಾಗೂ ಸತೀಶ ಜಾರಕಿಹೊಳಿ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಅಣ್ಣಾಸಾಹೇಬ ಜೊಲ್ಲೆ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕ ವಿಶ್ವಾಸ ವೈದ್ಯ, ವಿರೂಪಾಕ್ಷ ಮಾಮನಿ, ಅರವಿಂದ ಪಾಟೀಲ, ರಾಹುಲ ಜಾರಕಿಹೊಳಿ, ಅಮರನಾಥ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿ,ನೀಲಕಂಠ ಕಪ್ಪಲಗುದ್ದಿ ಹಾಗೂ ಸಚಿವ ಸತೀಶ ಜಾರಕಿಹೊಳಿ ಬೆಂಬಲಿತ ರಾಜು ಕಾಗೆ ಹಾಗೂ ಗಣೇಶ ಹುಕ್ಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
20ಜನ ವಾಪಸ್ ಪಡೆದುಕೊಂಡಿದ್ದಾರೆ.
ರಾಮದುರ್ಗ, ಬೈಲಹೊಂಗಲ, ಕಿತ್ತೂರು, ನಿಪ್ಪಾಣಿ, ಅಥಣಿ, ಹುಕ್ಕೇರಿ, ರಾಯಬಾಗ ತಾಲೂಕುಗಳಲ್ಲಿ ಅ.೧೯ ರಂದು ಚುನಾವಣೆ ನಡೆಯಲಿದೆ. ಸೋಮವಾರ ನಾಮ ಪತ್ರ ಕೊನೆಯ ದಿನವಾಗಿದ್ದರಿಂದ ಶಾಸಕ ಅಶೋಕ ಪಟ್ಟಣ, ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಶ್ರೀನಿವಾಸ ಪಾಟೀಲ ಸೇರಿ20 ಜನರು ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.