ಸತೀಶ ಜಾರಕಿಹೊಳಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್

Screenshot_20240911_104254_Google.jpg
Published on

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ಸಂತೋಷ. ವೈಯಕ್ತಿಕವಾಗಿ ನನ್ನ ಬೆಂಬಲ ಅವರಿಗಿದೆ ಎಂದು ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉತ್ತರ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ನಮಗೆ ಸಂತೋಷವಾಗುತ್ತದೆ ಎಂದರು.

ಬಿಜೆಪಿ ಪಕ್ಷದಿಂದ ಯಾರೂ ಬೆಂಬಲ ಕೊಡುವುದಿಲ್ಲ. ವೈಯಕ್ತಿಕವಾಗಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆದರೆ ನಮ್ಮ ಬೆಂಬಲ ಇದ್ದೆ ಇರುತ್ತದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ವಿನ ಅನುಕೂಲವಾಗುತ್ತದೆ ಎಂದರು.

ಬಿಜೆಪಿ ಸರರ್ಕಾದಲ್ಲಿಯೇ ಖಾನಾಪುರ ತಾಲೂಕಾ ಆಸ್ಪತ್ರೆ ನಿರ್ಮಾಣವಾಗಿತ್ತು. ಕೆಲ ಮೂಲಭೂತ ಸೌಕರ್ಯ ಕಲ್ಪಿಸಿ ಈಗ ಜನರ ಅನುಕೂಲಕ್ಕೆ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net