

ಬೆಳಗಾವಿ: ಜಿಲ್ಲೆಯ ಜಲಾಶಯಗಳಲ್ಲಿ ಕೈಗಾರಿಕಾ ಉದ್ಧೇಶಕ್ಕೆ ಮೀಸಲಿಟ್ಟಿರುವ ನೀರಿನ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಸರಕಾರದ ಆದೇಶವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಲಾಗುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಸುವರ್ಣ ವಿಧಾನಸೌದ ದಲ್ಲಿನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಸಾಕಷ್ಟು ಸರಕಾರಿ ಜಮೀನು ಲಭ್ಯವಿಲ್ಲದಿರುವುದರಿಂದ ಸದ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಜಮೀನು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ಖಾಸಗಿ ಜಮೀನು ಖರೀದಿಸಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುವುದು.ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದರು.
ಶಾಸಕ ಆಸಿಫ್(ರಾಜು) ಸೇಠ್ ಮಾತನಾಡಿ,ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ-ಧಾರವಾಡ ಕೈಗಾರಿಕೆಗಳಿಗೆ ನೀಡುವ ಕುರಿತು ಮಾಹಿತಿಯನ್ನು ಕೇಳಿದ ಶಾಸಕ ಆಸಿಫ್(ರಾಜು) ಸೇಠ್ ಅವರು, ಹಿಡಕಲ್ ಜಲಾಶಯದಿಂದ ಕೈಗಾರಿಕಾ ಉದ್ಧೇಶಕ್ಕಾಗಿ ನೀರು ಕೊಂಡೊಯ್ಯಲು ಇದುವರೆಗೆ ಅನುನತಿ ನೀಡಿರದಿದ್ದರೆ ತಕ್ಷಣವೇ ಕಾಮಗಾರಿಯನ್ನು ತಡೆಹಿಡಿಯಬೇಕು ಎಂದು ಶಾಸಕ ಸೇಠ್ ಸಭೆಯಲ್ಲಿ ಒತ್ತಾಯಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ,ಹಿಡಕಲ್ ಜಲಾಶಯದಿಂದ 0.58 ಟಿಎಂಸಿ ನೀರನ್ನು ಕಿತ್ತೂರು ಹಾಗೂ ಧಾರವಾಡ ಕೈಗಾರಿಕಾ ಪ್ರದೇಶಗಳಿಗೆ ನೀರು ಹಂಚಿಕೆ ನಿಯಮಾನುಸಾರ ಮಾಡಲಾಗಿರುತ್ತದೆ.ಜಲಾಶಯದ ಹಿನ್ನೀರಿನಿಂದ ನೀರು ಪಡೆಯುತ್ತಿಲ್ಲ. ಇದರ ಬದಲಾಗಿ ಜಲಾಶಯದಿಂದ ಬಿಡುಗಡೆ ಮಾಡಲಾದ ನೀರನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ. ಏರೋಸ್ಪೇಸ್, ಆಟೋಮೊಬೈಲ್ ಸೇರಿದಂತೆ ಹನ್ನೊಂದು ಬಗೆಯ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದರು
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ,ಈ ಆಟೋಮೊಬೈಲ್ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶವಿರುವುದರಿಂದ ಇದಕ್ಕಾಗಿ ಜಮೀನು ಗುರುತಿಸಿ ಕೈಗಾರಿಕೋದ್ಯಮಿಗಳಿಗೆ ಆಹ್ವಾನ ನೀಡಬೇಕಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಲಹೆ ನೀಡಿದರು.