ಶಾಸಕರಿಂದ ಸೇತುವೆ ಪರಿಶೀಲನೆ

05 SARAG 3
MLA inspects bridge
Published on

ಸರಗೂರು: ತಾಲೂಕಿನ ಕಬಿನಿ ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದ ಪರಿಣಾಮ ಭತ್ತ ತುಂಬಿದ್ದ ಲಾರಿ ನಾಲೆಗೆ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಸೋಮವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಕಬಿನಿ ಬಲದಂಡೆ ಕಾಲುವೆಯ ಸೇತುವೆಗಳು ಶಿಥಿಲಕೊಂಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಕೊತ್ತೇಗಾಲ, ಚಿಕ್ಕ ದೇವಮ್ಮ ಬೆಟ್ಟಕ್ಕೆ ಹೋಗುವ ಸೇತುವೆಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣ ಮಾಡಲಾಗುವುದು. ಶಿಥಿಲಗೊಂಡಿರುವ ಸೇತುವೆಗಳಿಗೆ ಮುಂಜಾಗ್ರತವಾಗಿ ನಾಮಫಲಕ ಅಳವಡಿಸಿ ಹಾಗೂ ತುಂಬ ಶಿಥಿಲವಾಗಿರುವ ಸೇತುವೆಗಳಲ್ಲಿ ಭಾರಿ ವಾಹನಗಳು ಸಂಚರಿಸದಂತೆ ಕ್ರಮ ವಹಿಸಬೇಕು ಎಂದು ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರರು ಅಧಿಕಾರಿಗಳಿಗೆ ಸೂಚಿಸಿದರು.

ಕಬಿನಿ ಜಲಾಶಯದ ಕಾರ್ಯಪಾಲಕ ಇಂಜಿನಿಯರ್ ಉಷಾ ಮಾತನಾಡಿ, ಶಿಥಿಲಗೊಂಡಿರುವ ಸೇತುವೆಗಳನ್ನು ಪರಿಶೀಲನೆ ನಡೆಸಲಾಗಿದೆ. ಸಾರ್ವಜನಿಕರು ಹಾಗೂ ರೈತರ ಹಿತದೃಷ್ಟಿಯಿಂದ ನಾಮಫಲಕ ಅಳವಡಿಸಲಾಗುವುದು ಎಂದು ತಿಳಿಸಿದರು.

ಪಪಂ ಸದಸ್ಯ ಶ್ರೀನಿವಾಸ, ತಾಪಂ ಮಾಜಿ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ, ಕೊತ್ತೇಗಾಲ ಗ್ರಾಪಂ ಅಧ್ಯಕ್ಷ ಕುಮಾರ್, ಸದಸ್ಯರಾದ ಮಹದೇವ, ಚಲುವಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ, ಚಿಕ್ಕಮಾದು ಅಭಿಮಾನಿಗಳ ಬಳಗದ ಅಧ್ಯಕ್ಷ ರಾಜನಾಯಕ, ಮುಖಂಡರಾದ ವನಸಿರಿ ಉಮೇಶ್, ಶಶಿ ಪಾಟೀಲ್, ಈರನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net