ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬದಿಗಿರಿಸಿ ಎಲ್ಲರೂ ಒಗ್ಗಟ್ಟಾಗೋಣ; ಹಿಟ್ನಾಳ್

PUBLIC MEETING
ಮಾದಿನೂರು ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಶನಿವಾರ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ಪ್ರಸನ್ನ ಗಡಾದ, ರಾಮಣ್ಣ ಚೌಡ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ, ತಹಸೀಲ್ದಾರ್ ವಿಠ್ಠಲ್ ಚೌಗಲೆ, ತಾಪಂ ಇಒ ದುಂಡೇಶ್ ತುರಾದಿ ಇದ್ದರು.
Published on

ಕೊಪ್ಪಳ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಬದಿಗಿರಿಸಿ, ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಮಾದಿನೂರು ಗ್ರಾಮದಲ್ಲಿ ಜನಸಂಪರ್ಕ ಹಾಗೂ ಕೃತಜ್ಞತೆ ಸಭೆಯಲ್ಲಿ ಶನಿವಾರ ಮಾತನಾಡಿದರು. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡದೆ ಅಧಿಕಾರಿಗಳು, ಗುತ್ತಿಗೆದಾರರಿಂದ ಸಮರ್ಪಕ ಕೆಲಸ ಪಡೆಯುವ ನಿಟ್ಟಿನಲ್ಲಿ ಗ್ರಾಮಸ್ಥರು, ಗ್ರಾಮದ ಜನಪ್ರತಿನಿಧಿಗಳು ಒಗ್ಗೂಡಬೇಕು. ಕ್ಷೇತ್ರದ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಅಭಿವೃದ್ಧಿ ಕೆಲಸಗಳಿಗೆ ಹಂತಹಂತವಾಗಿ ಅನುದಾನವನ್ನು ಮಂಜೂರು ಮಾಡಿ, ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕಂಕಣಬದ್ಧರಾಗಿ ಕೆಲಸ ಮಾಡೋಣ ಎಂದರು.

ಕೊಪ್ಪಳ ನಗರದ ಮೆಡಿಕಲ್ ಕಾಲೇಜ್ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ 450 ಬೆಡ್ ಆಸ್ಪತ್ರೆಯನ್ನು 1000 ಬೆಡ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಗುರಿಯಿದೆ. ಸಿಎಂ ಸಿದ್ದರಾಮಯ್ಯ ಇದಕ್ಕಾಗಿ 67 ಕೋಟಿ ರೂ.ಅನುದಾನವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಅವರಿಂದಲೇ ಉದ್ಘಾಟನೆ ಮಾಡಿಸುವ ಉದ್ದೇಶವಿದೆ ಎಂದರು.

ಜಿಪಂ ಮಾಜಿ ಸದಸ್ಯರಾದ ಪ್ರಸನ್ನ ಗಡಾದ, ರಾಮಣ್ಣ ಚೌಡ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ, ತಹಸೀಲ್ದಾರ್ ವಿಠ್ಠಲ್ ಚೌಗಲೆ, ತಾಪಂ ಇಒ ದುಂಡೇಶ್ ತುರಾದಿ, ಮುಖಂಡರಾದ ದೇವಪ್ಪ ಓಜನಳ್ಳಿ, ಮುಕ್ಕಣ್ಣ ಚಿಲವಾಡಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net