

ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಮನವಿ ಸಲ್ಲಿಸಿದ್ದು, ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಶಾಸಕರ ಕಚೇರಿಯಲ್ಲಿ ಗುರುವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಜನರ ಬಳಿಗೆ ಜನಪ್ರತಿನಿಧಿ ಎಂಬ ದ್ಯೇಯೊಂದಿಗೆ ಜನರಿರುವ ಸ್ಥಳಕ್ಕೆ ತೆರಳಿ ಸಮಸ್ಯೆಗಳನ್ನು ಬಗೆ ಹರಿಸಲು ಕ್ರಮ ವಹಿಸುತ್ತಿದೆ ಎಂದರು.
ಸಾರ್ವಜನಿಕರಿಗೆ ದೊರುಕುವ ಸೌಲಭ್ಯಗಳಿಗೆ ಯಾವುದೇ ಅಧಿಕಾರಿಗಳು ಅಲೆಸಬಾರದು. ಅವರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.
ಆರೋಗ್ಯ ಸಮಸ್ಯೆ ಹೇಳಿಕೊಂಡು ಬಂದ ಹತ್ತಕ್ಕೂ ಹೆಚ್ಚು ಜನರಿಗೆ ಸ್ಥಳದಲ್ಲೇ ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಧನ ಸಹಾಯ ನೀಡಲಾಯಿತು. ಜಿ.ಪಂ.ಮಾಜಿ ಸದಸ್ಯರಾದ ಚಂದೂಪುರ ಪಾಪಣ್ಣ, ಎ.ಎಸ್.ರಾಜೀವ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಕದಲೂರು ಗ್ರಾ.ಪಂ.ಅಧ್ಯಕ್ಷ ತಿಮ್ಮೇಗೌಡ ಇತರರು ಇದ್ದರು.