ಬಿ.ವೈ.ವಿಜಯೇಂದ್ರ ಅಭಿನಂದಿಸಿದ ಶಾಸಕ ಕಾಮತ್

mng-15nov-vedavyasa
Published on



ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ ಅವರನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಭಿನಂದಿಸಿದರು. ಬಿ.ವೈ.ವಿಜಯೇಂದ್ರ ಅವರ ನಾಯಕತ್ವದಲ್ಲಿ ಪಕ್ಷ ತಳಮಟ್ಟದಿಂದ ಮತ್ತೆ ಸದೃಢಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿ ಎಲ್ಲೆಡೆ ಅಭೂತಪೂರ್ವ ಯಶಸ್ಸು ಸಾಧಿಸಲಿದೆ ಎಂದು ಶಾಸಕ ಕಾಮತ್ ಈ ಸಂದರ್ಭ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net