

ಮಂಗಳೂರು : ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್ ಅವರ ಆತ್ಮಹತ್ಯೆಗೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಿಂದಲೇ ಎಲ್ಲವನ್ನೂ ಮುಚ್ಚಿ ಹಾಕಲು ಯತ್ನಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ನಡೆಸಿದ ಬೃಹತ್ ಹೋರಾಟದ ಫಲವಾಗಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡುವಂತಾಗಿದೆ. ಪ್ರಸ್ತುತ ರಾಜ್ಯದಲ್ಲಿ ಸರ್ಕಾರಕ್ಕೆ ನಿರ್ದಿಷ್ಟ ಪಾಲು ನೀಡಿದರೆ ಯಾವ ಅಕ್ರಮವನ್ನು ಬೇಕಾದರೂ ನಡೆಸಿಕೊಂಡು ಹೋಗುವ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಪ್ರಾಮಾಣಿಕ ಅಧಿಕಾರಿಗಳ ತಲೆದಂಡವಾಗುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಹೆದರಿ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.