

ಮಂಗಳೂರು : ಹಿಂದು ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿ ಮೀರಿದೆ.
ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಹಿಂದು ಮುಖಂಡರ ಮೇಲೆ ಹಲ್ಲೆಯಾಗುತ್ತಿರುವುದು ಜಿಲ್ಲೆಯಲ್ಲಿ ಹಿಂದುಗಳ ಸುರಕ್ಷತೆ ಬಗ್ಗೆ ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಗೆ ಹೋಗಿದ್ದ ಬಜರಂಗದಳದ ಮುಖಂಡನ ಮೇಲೆ ಪೊಲೀಸ್ ನಿರೀಕ್ಷಕರ ಸಮ್ಮುಖದಲ್ಲೇ ಮತಾಂಧನೊಬ್ಬ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ರಕ್ಷಣೆ ನೀಡಬೇಕಾದ ಪೊಲೀಸ್ ಠಾಣೆಗಳೂ ಸಹ ಹಿಂದುಗಳ ಪಾಲಿಗೆ ಸುರಕ್ಷಿತವಾಗಿಲ್ಲ ಎಂಬುದನ್ನು ಇದು ತೋರಿಸಿಕೊಟ್ಟಿದೆ. ಅಷ್ಟರಮಟ್ಟಿಗೆ ಕಾಂಗ್ರೆಸ್ ಸರ್ಕಾರ ಜಿಹಾದಿಗಳ ಬೆಂಬಲಕ್ಕೆ ನಿಂತಿದೆ ಎಂದು ಅವರು ಹೇಳಿದ್ದಾರೆ.
ನ್ಯಾಯ ಕೇಳಲು ಬಂದವರ ಮೇಲೆಯೇ ಹೀಗೆ ದೌರ್ಜನ್ಯ ನಡೆದರೆ ನ್ಯಾಯಕ್ಕಾಗಿ ಇನ್ನೆಲ್ಲಿ ಹೋಗಬೇಕು? ಹಿಂದುಗಳ ತಾಳ್ಮೆಯ ಕಟ್ಟೆಯೊಡೆದರೆ ಪರಿಣಾಮ ತೀಕ್ಷ್ಣವಾಗಲಿದೆ. ಕೂಡಲೇ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು . ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದರ ನೇರ ಹೊಣೆಯನ್ನು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವೇ ಹೊರಬೇಕು ಎಂದು ಶಾಸಕರು ಎಚ್ಚರಿಕೆ ನೀಡಿದರು.
ವೇದವ್ಯಾಸ ಕಾಮತ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಸಂತೋಷ್‌ಕುಮಾರ್ ರೈ ಬೋಳಿಯಾರ್ ಉಪಸ್ಥಿತರಿದ್ದರು.