

ಮಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಡಿ.ವೇದವ್ಯಾಸ ಕಾಮತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ಬೆಂಗಳೂರಿನ ತೀವ್ರ ಚಳಿಯನ್ನೂ ಲೆಕ್ಕಿಸದೇ ಅನಿರ್ದಿಷ್ಟಾವಧಿ ಧರಣಿ
ನಡೆಸುತ್ತಿದ್ದಾರೆ. ಲಾಕ್‌ಡೌನ್ ಸಂದರ್ಭ ಜೀವದ ಹಂಗು ತೊರೆದು ಕರೊನಾ ವಾರಿಯರ್‌ಗಳಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರ ತ್ಯಾಗವನ್ನು ಪರಿಗಣಿಸಬೇಲು. ಸರ್ಕಾರ ಅವರನ್ನು ಗೌರವಯುತವಾಗಿ ನಡೆಸಿಕೊಂಡು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಪ್ರತಿಭಟನಾಕಾರರು ಹಾಗೂ ಅವರ ಜತೆ ಇರುವ ಪುಟ್ಟ ಮಕ್ಕಳು ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ ಸೌಜನ್ಯ ತೋರದ
ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ಶಾಸಕರು ಹೇಳಿದ್ದಾರೆ .
ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಪೊಳ್ಳು ಆಶ್ವಾಸನೆ ನೀಡಿದ
ಕಾಂಗ್ರೆಸ್ ನಾಯಕರಿಗೆ ಈಗ ಸಮಸ್ಯೆ ಆಲಿಸಲೂ ಯೋಗ್ಯತೆ ಇಲ್ಲವಾಗಿದೆ. ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಸಹಿತ ಎಲ್ಲ ಬೇಡಿಕೆಗಳನ್ನು ಈಡೇರಿಸ ಬೇಕು ಎಂದು ಶಾಸಕ ಕಾಮತ್ ಒತ್ತಾಯಿಸಿದ್ದಾರೆ.
...............................