ದ.ಕ. ಹೆಸರು ಮಂಗಳೂರು ಎಂದಾಗಲಿ : ಶಾಸಕ ವೇದವ್ಯಾಸ ಕಾಮತ್ ಆಗ್ರಹ

allwyn_130820_kamath
Published on




ಮಂಗಳೂರು : ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣ
ಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದರು.
ಇದಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಪ್ರಸ್ತಾವನೆ ಸಲ್ಲಿಕೆಯಾಗಲು ಸರ್ಕಾರದಿಂದ ಪೂರಕವಾದ ವಾತಾವರಣ ಸೃಷ್ಟಿಯಾಗಬೇಕು ಎಂದು ಅವರು ಹೇಳಿದರು.
ತುಳುನಾಡಿನಲ್ಲಿ ತಾಯಿ ಮಂಗಳಾಂಬಿಕೆಯಿಂದ ಮಂಗಳೂರು ಹೆಸರು ಬಂದಿದೆ. ಆ ಹೆಸರಿನಿಂದ ಜಾಗತಿಕ ಮಟ್ಟದಲ್ಲಿ ಬ್ರಾೃಂಡ್ ಮಂಗಳೂರು ಸೃಷ್ಟಿಸಲು ಅನುಕೂಲವಾಗುತ್ತದೆ. ಉಡುಪಿ, ಹಾಸನ, ಬೆಂಗಳೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಂತೆ ನಮ್ಮ ಜಿಲ್ಲೆಗೆ ಮಂಗಳೂರು ಹೆಸರು ಅಧಿಕೃತವಾಗಲಿ ಎಂದು ಶಾಸಕ ಕಾಮತ್ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net