ವಿಶೇಷ ಅನುದಾನ ಬಿಡುಗಡೆಗೆ ಶಾಸಕ ಕಾಮತ್ ಆಗ್ರಹ

allwyn_130820_kamath
Published on


ಮಂಗಳೂರು : ಮಂಗಳೂರುನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇವುಗಳ ಪುನರ್ ನಿರ್ಮಾಣಕ್ಕಾಗಿ ತುರ್ತು ಕಾಮಗಾರಿ ಅಗತ್ಯವಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ವೇದವ್ಯಾಸ ಕಾಮತ್
ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ.
ಪ್ರಾಕೃತಿಕ ವಿಕೋಪದಿಂದಾಗಿರುವ ಹಾನಿಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಯಾವುದೇ ವಿಶೇಷ ಅನುದಾನ ಬಿಡುಗಡೆಗೊಳಿಸಿಲ್ಲ. ಮೊದಲನೇ ಅವಧಿಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಅರ್ಧದಷ್ಟು ಕೆಲಸ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಅದಕ್ಕೆ ತಡೆ ನೀಡಿದ್ದರಿಂದ ಉಳಿದ ಕಾಮಗಾರಿಗಳು ಬಾಕಿಯಾಗಿವೆ. ಪ್ರಸ್ತುತ ಮ.ನ.ಪಾ ದಲ್ಲಿ ಬಜೆಟ್
ಕೊರತೆಯಾಗಿದ್ದು ಪರಿಹಾರ ಕಾರ್ಯ, ಅಭಿವೃದ್ಧಿ ಕಾರ್ಯಕ್ಕೂ ದುಡ್ಡಿಲ್ಲ. ಗುತ್ತಿಗೆದಾರರಿಗೆ 200 ಕೋಟಿ ರೂ.ಅಧಿಕ ಪಾವತಿ ಬಾಕಿಯಿದ್ದು ಎಲ್ಲ ಕಾಮಗಾರಿಗಳು ಸ್ಥಗಿತಗೊಂಡಿವೆ . ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವಂತೆ ಮಂಗಳೂರಿನ ಜನತೆಯ ಪರವಾಗಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.
.................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net