ವಿದ್ಯಾರ್ಥಿ ದೆಸೆಯಲ್ಲೇ ಪರಿಸರದ ಅರಿವು ಅಗತ್ಯ, ಶಾಸಕ ಕೃಷ್ಣನಾಯ್ಕ ಹೇಳಿಕೆ

SASYA SHAMALA
ಹೂವಿನಹಡಗಲಿಯ ಜಿಪಿಜಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಆಯೋಜಿಸಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಶಾಸಕ ಕೃಷ್ಣನಾಯ್ಕ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಬಿಇಒ ಮಹೇಶ್ ಪೂಜಾರ್, ಆರ್‌ಎಫ್‌ಒ ಪಿ.ಗುಡ್ಡಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಪ್ರಾಚಾರ್ಯ ಕೋರಿ ಹಾಲೇಶ್ ಇತರರಿದ್ದರು.
Published on

ಹೂವಿನಹಡಗಲಿ: ವಿದ್ಯಾರ್ಥಿ ದೆಸೆಯಲ್ಲೇ ಮಕ್ಕಳಿಗೆ ಶಾಲೆಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.

ಶಾಲೆಯ ಆವರಣದಲ್ಲಿ ಸಸ್ಯಸಂಪತ್ತನ್ನು ಬೆಳೆಸುವ ಮೂಲಕ ಶಿಕ್ಷಕರು ಮಕ್ಕಳಿಗೆ ಪರಿಸರದ ಅರಿವು ಮೂಡಿಸಬೇಕು. ಪರಿಸರ ಮಾಲಿನ್ಯದಿಂದಾಗುವ ಅನಾಹುತಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳ ಆವರಣಗಳಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರನ್ನು ಉಳಿಸಿ ಮತ್ತು ಬೆಳೆಸಲು ಎಲ್ಲರೂ ಮುಂದಾಗಬೇಕು ಎಂದರು.

ಬಿಇಒ ಮಹೇಶ್ ಪೂಜಾರ್, ಆರ್‌ಎಫ್‌ಒ ಪಿ.ಗುಡ್ಡಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಪ್ರಾಚಾರ್ಯ ಕೋರಿ ಹಾಲೇಶ್, ದೈಹಿಕ ಅಧೀಕ್ಷಕ ಎಸ್.ಮುಸ್ತಾಫಾ, ಉಪ ಪ್ರಾಚಾರ್ಯ ಪಿ.ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಬಿ.ಬಿ.ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net