ಮಾಧ್ಯಮಗಳಿಗಿದೆ ಜನರ ಮನಪರಿವರ್ತಿಸುವ ಶಕ್ತಿ

PATRIKA DINA
ಹೂವಿನಹಡಗಲಿಯ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೃಷ್ಣನಾಯ್ಕ ಮಾತನಾಡಿದರು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ, ಉಪಾಧ್ಯಕ್ಷ ಕಿಚಿಡಿ ಕೊಟ್ರೇಶ್, ತಾಲೂಕು ಅಧ್ಯಕ್ಷ ಎಂ.ನಿಂಗಪ್ಪ ಇತರರಿದ್ದರು.
Published on

ಹೂವಿನಹಡಗಲಿ: ಪತ್ರಕರ್ತರು ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದರ ಜತೆಗೆ ನೊಂದವರ ಪರ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಶನಿವಾರ ಆಯೋಜಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜನರ ಮನಪರಿವರ್ತನೆ ಮಾಡುವ ಶಕ್ತಿ ಮಾಧ್ಯಮಗಳು ಹೊಂದಿವೆ. ಇದುವರೆಗೆ ಆಡಳಿತ ನಡೆಸಿದ ಸರ್ಕಾರಗಳು ಮಾಧ್ಯಮದವರಿಗಾಗಿ ಯಾವುದೇ ಯೋಜನೆ ಜಾರಿಗೆ ತರಲಿಲ್ಲ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್‌ಪಾಸ್, ಇತರ ಸೌಲಭ್ಯ ಕಲ್ಪಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಪತ್ರಕರ್ತ ಸೋಮರಡ್ಡಿ ಅಳವಂಡಿ ಮಾತನಾಡಿದರು. ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಕ್ಕಿ ಶಿವಕುಮಾರ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ.ಸತ್ಯನಾರಾಯಣ ಮಾತನಾಡಿದರು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಜಿಬಿಆರ್ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಪಾಟೀಲ, ಕಾನಿಪ ರಾಜ್ಯ ಸಮಿತಿ ಸದಸ್ಯ ಕೆ.ಲಕ್ಷ್ಮಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net