ಬರಪೀಡಿತ ತಾಲ್ಲೂಕನ್ನಾಗಿ ಘೋಷಿಸಿ

Untitled design (2)
ಶಾಸಕ ಎಲ್.ಕೃಷ್ಣನಾಯ್ಕ
Published on

ಹೂವಿನಹಡಗಲಿ: ತಾಲ್ಲೂಕಿನಲ್ಲಿ ಮುಂಗಾರು ವೈಫಲ್ಯದಿಂದ ಬೆಳೆಗಳು ಹಾನಿಗೀಡಾಗಿವೆ. ಹಾಗಾಗಿ ಸರ್ಕಾರ ರೈತರಿಗೆ ತುರ್ತು ಪರಿಹಾರ ನೀಡಲಿ ಎಂದು ಶಾಸಕ ಎಲ್.ಕೃಷ್ಣನಾಯ್ಕ ಆಗ್ರಹಿಸಿದರು.

ಸಕಾಲಕ್ಕೆ ಮಳೆ ಬಾರದೆ ಸಂಕಷ್ಟ

ತಾಲ್ಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ತಾಲೂಕಿನ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ. ಆದರೆ ಸಕಾಲಕ್ಕರ ಮಳೆಯಾಗದೆ ರೈತರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಆದ್ದರಿಂದ ಸರ್ಕಾರ ಕೂಡಲೇ ಬರಪೀಡಿತ ತಾಲೂಕನ್ನಾಗಿ ಘೋಷಿಸಲಿ ಎಂದು ಒತ್ತಾಯಿಸಿದರು.

ತಾಲ್ಲೂಕಿನ ಪರಿಸ್ಥಿತಿಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿದೆ. ತಾಲ್ಲೂಕಿನಲ್ಲಿ ಶೇ.28 ಮಳೆ ಕೊರತೆ ಉಂಟಾಗಿಗಿದ್ದು, 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟವಾಗಿದೆ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net