

ಲಕ್ಷ್ಮೇಶ್ವರ: ಪಟ್ಟಣದ ಹೊರವಲಯದ ಶಿಗ್ಲಿ ರಸ್ತೆಗೆ ಹೊಂದಿಕೊಂಡಿದ್ದ ಹೊಲದಲ್ಲಿ ಆಕಸ್ಮಿಕ ಬೆಂಕಿ ತಗುಲಿ ನೂರಾರು ಹೆಬ್ಬೇವು ಗಿಡಗಳು ಹಾಗೂ ನೀರಾವರಿ ಸಾಮಗ್ರಿಗಳು ಹಾನಿಗೀಡಾಗಿರುವುದನ್ನು ಶಾಸಕ ಡಾ. ಚಂದ್ರ ಲಮಾಣಿ ಸೋಮವಾರ ಪರಿಶೀಲಿಸಿದರು.
ಶಿಗ್ಲಿಗೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಜಯಂತಿ ಸೋಮಶೇಖರ ಗಾಂಜಿ ಅವರ ಹೊಲದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಹೆಬ್ಬೇವು ಗಿಡಗಳು ಹಾಗೂ ನೀರಾವರಿ ಸಾಮಗ್ರಿ ಸುಟ್ಟಿದ್ದವು. ಘಟನೆಯಲ್ಲಿ ಅಪಾರ ಹಾನಿ ಸಂಭವಿಸಿತ್ತು. ಶಾಸಕ ಡಾ. ಚಂದ್ರು ಲಮಾಣಿ ಸೋಮವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್ ವಾಸುದೇವ ಸ್ವಾಮಿ ಅವರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಗ್ರಾಮ ಆಡಳಿತ ಅಧಿಕಾರಿ ಡಿ.ಎಸ್. ಕುಲಕರ್ಣಿ, ಸೋಮಶೇಖರ ಗಾಂಜಿ, ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿದ್ದರು.