

ಲಕ್ಷೆ್ಮೕಶ್ವರ: ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಬುಧವಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ವಿಶೇಷ ಅನುದಾನವನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಏರ್ಪಾಟಾಗಿದ್ದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ದಿಶಾ ಸಮಿತಿ ಸದಸ್ಯರೂ ಆಗಿರುವ ಶಾಸಕ ಡಾ.ಚಂದ್ರು ಲಮಾಣಿ ಪಾಲ್ಗೊಂಡಿದ್ದರು.
ಸಭೆಯ ಬಳಿಕ ಶಾಸಕರು ನೇರವಾಗಿ ಮುಖ್ಯಮಂತ್ರಿಗಳ ಬಳಿ ತೆರಳಿ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಿಎಂಗೆ ವಿವರಿಸಿ, ಕ್ಷೇತ್ರದ ಜನರ ಹಿತದೃಷ್ಟಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಮೇರೆಗೆ ಅನುದಾನ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಕಾರಾತ್ಮಕವಾಗಿ ಮನವಿಗೆ ಸ್ಪಂದಿಸಿದರು.