

ನಂಜನಗೂಡು: ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.40 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮಂಗಳವಾರ ಶಾಸಕ ದರ್ಶನ್ ಧ್ರುವನಾರಾಯಣ ಚಾಲನೆ ನೀಡಿದರು.
ಹೆಗ್ಗಡಹಳ್ಳಿ, ಶಿರಮಳ್ಳಿ, ಕುರಿಹುಂಡಿ, ಕಪ್ಪಸೋಗೆ, ರಾಜೂರು, ನೆಲ್ಲಿತಾಳಪುರ, ಆಕಳ, ಕಡಬೂರು ಗ್ರಾಮಗಳಲ್ಲಿ ಸಿ.ಸಿ.ರಸ್ತೆ, ಚರಂಡಿ, ಬಸವ ಭವನ, ಸಮುದಾಯ ಭವನ, ಅಂಗನವಾಡಿ ಕಟ್ಟಡಗಳಿಗೆ ಭೂಮಿಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ತಾಲೂಕಿನಲ್ಲಿ 1.40 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಮಾರುತಿ, ಗ್ರಾಪಂ ಅಧ್ಯಕ್ಷ ಕಾಂತರಾಜು, ನಾಗೇಶ್ ರಾಜ್, ದೊರೆಸ್ವಾಮಿ ನಾಯಕ, ಹುಚ್ಚೇಗೌಡ, ಹರೀಶ್ ಇದ್ದರು.