

ಹುಬ್ಬಳ್ಳಿ : ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 48ರ ಗಣೇಶ ಪಾರ್ಕ್ಗೆ ಬುಧವಾರ ಬೆಳಗ್ಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕ ಮಹೇಶ ಟೆಂಗಿನಕಾಯಿ, ಸ್ಮಾರ್ಟ್ಸಿಟಿ ಯೋಜನೆ ಅಡಿ ಕೈಗೊಂಡಿರುವ ಒಳಚರಂಡಿ ಹಾಗೂ ನಾಲಾ ಕಾಮಗಾರಿ ಪರಿಶೀಲಿಸಿದರು.
ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ ಟೆಂಗಿನಕಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿ ಸಂದರ್ಭದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು. ನಂತರ ಸ್ಥಳೀಯ ನಾಗರಿಕರ ಅಹವಾಲು ಆಲಿಸಿದರು. ಕೆಲವು ಸಮಸ್ಯೆಗಳ ನಿವಾರಣೆಗೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ಸದಸ್ಯ ಕಿಶನ್ ಬೆಳಗಾವಿ, ಮುಖಂಡರಾದ ರವಿರಾಜ್ ಕೊಡ್ಲಿ, ಮಂಜುನಾಥ ಖಟಾವಕರ, ನಾಗರಾಜ ರಟಗಲ್ ಹಾಗೂ ಇತರರು ಉಪಸ್ಥಿತರಿದ್ದರು.