ಪ್ರಾಚ್ಯವಸ್ತುಗಳ ಸಂರಕ್ಷಣೆ ಮಹತ್ವದ ಕಾರ್ಯ

ಲಿಂಗಸುಗೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ವಸ್ತುಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶಾಸಕ ಮಾನಪ್ಪ ವಜ್ಜಲ್ ಶುಕ್ರವಾರ ಉದ್ಘಾಟಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ಸುನೀತಾ ಕೆಂಭಾವಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಜೆ.ಶಿವರಾಮ್, ಗಣೇಶ ದರಬಿ, ಪ್ರಾಚಾರ್ಯ ಶರಣಬಸಪ್ಪ ಅರಿಕೇರಿ, ಗ್ರಂಥಪಾಲಕ ಡಾ.ಪರಮಾನಂದ ಇದ್ದರು.
ಲಿಂಗಸುಗೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ವಸ್ತುಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶಾಸಕ ಮಾನಪ್ಪ ವಜ್ಜಲ್ ಶುಕ್ರವಾರ ಉದ್ಘಾಟಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ಸುನೀತಾ ಕೆಂಭಾವಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಜೆ.ಶಿವರಾಮ್, ಗಣೇಶ ದರಬಿ, ಪ್ರಾಚಾರ್ಯ ಶರಣಬಸಪ್ಪ ಅರಿಕೇರಿ, ಗ್ರಂಥಪಾಲಕ ಡಾ.ಪರಮಾನಂದ ಇದ್ದರು.
Published on

ಲಿಂಗಸುಗೂರು: ಭಾರತೀಯ ಸಂಸ್ಕೃತಿ, ಪರಂಪರೆ ಸಾರುವ ಪ್ರಾಚೀನ ವಸ್ತುಗಳನ್ನು ಸಂಶೋಧಿಸಿ, ಸಂಗ್ರಹಿಸಿ ಡಿಜಿಟಲೀಕರಣಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ವಸ್ತುಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಇಂದಿನ ಆಧುನಿಕ ಭರಾಟೆಯಲ್ಲಿ ಐತಿಹಾಸಿಕ ದಾಖಲೆಗಳ ಸಂರಕ್ಷಣೆ ಅವಶ್ಯವಾಗಿದೆ. ಪ್ರಾಚ್ಯವಸ್ತುಗಳ ಸಂರಕ್ಷಿಸಿ ಅವುಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು.

ಪ್ರಾಚೀನ ವಸ್ತುಗಳನ್ನು ಸಂಗ್ರಹಿಸಿ ಸಂರಕ್ಷಿಸುವ ಕಾರ್ಯ ಶ್ಲಾಘನೀಯ

ಬೇಲೂರು, ಹಳೆಬೀಡು, ಹಂಪಿ ಸೇರಿ ಅನೇಕ ದೇವಸ್ಥಾನಗಳ ಶಿಲ್ಪಕಲೆಗಳು ಇಂದಿಗೂ ಜೀವಂತಿಕೆ ಹೊಂದಿವೆ. ಕೋಟೆ-ಕೊತ್ತಲು, ಅರಮನೆ, ಚಿನ್ನ, ಬೆಳ್ಳಿ ನಾಣ್ಯಗಳು, ಖಡ್ಗ, ಕಿರೀಟ ಹಾಗೂ ಇತರ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸಿ ಸಂರಕ್ಷಿಸುವ ಕಾರ್ಯ ನಡೆದಿರುವುದು ಸಂತೋಷದ ವಿಷಯವಾಗಿದೆ. ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.

ಬ್ರಿಟಿಷರು ಎರಡು ಶತಮಾನ ದೇಶ ಆಳಿ ಇಲ್ಲಿನ ಸಂಪತ್ತನ್ನು ಲೂಟಿ ಮಾಡಿದರೂ ಭಾರತ ಸಂಪತ್ಭರಿತವಾಗಿದೆ. ಇತ್ತಿಚಿನ ದಿನಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಮುನ್ನಡೆಯುತ್ತಿದೆ. ಕ್ರೀಡೆ, ಕೈಗಾರಿಕೆ, ತಂತ್ರಜ್ಞಾನ, ಬಾಹ್ಯಾಕಾಶ ಸೇರಿ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು. ವಿಶ್ವದ ಅಗ್ರಮಾನ್ಯ ರಾಷ್ಟ್ರಗಳ ಸಾಲಿನಲ್ಲಿ ಭಾರತ ಸೇರ್ಪಡೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ವಜ್ಜಲ್ ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷೆ ಸುನೀತಾ ಕೆಂಭಾವಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಜೆ.ಶಿವರಾಮ್, ಗಣೇಶ ದರಬಿ, ಪ್ರಾಚಾರ್ಯ ಶರಣಬಸಪ್ಪ ಅರಿಕೇರಿ, ಗ್ರಂಥಪಾಲಕ ಡಾ.ಪರಮಾನಂದ, ಉಪನ್ಯಾಸಕರಾದ ಡಾ.ಮಹಾದೇವಪ್ಪ ನಾಗರಹಾಳ, ಡಾ.ಮಹಾಂತಗೌಡ, ಸಿದ್ದರಾಮರೆಡ್ಡಿ, ಖಾಜಾಹುಸೇನ್, ಅಮರೇಶ ವೆಂಕಟಾಪುರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net