ಮಾದಪ್ಪನ ದರ್ಶನ ಪಡೆದ ಶಾಸಕ ಮಂಜುನಾಥ್

15 HANUR 4
ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
Published on

ಹನೂರು:ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಗೆ ಭಾನುವಾರ ಶಾಸಕ ಎಂ.ಆರ್. ಮಂಜುನಾಥ್ ಅವರು ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಬೆಳಗ್ಗೆ 7.30ರಲ್ಲಿ ದೇಗುಲಕ್ಕೆ ಭೇಟಿ ನೀಡಿದ ಶಾಸಕರನ್ನು ಪ್ರಾಧಿಕಾರದ ಅಧಿಕಾರಿಗಳು ಹಾಗೂ ದೇಗುಲದ ಅರ್ಚಕರು ವಾದ್ಯಮೇಳದೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಅವರು ಮಾತನಾಡಿ, ಕ್ಷೇತ್ರದ ಶ್ರೀ ಮಲೆಮಹದೇಶ್ವರರು ಕೋಟ್ಯಂತರ ಭಕ್ತರ ಆರಾದ್ಯ ದೈವ. ಹಾಗಾಗಿ ಮ.ಬೆಟ್ಟ ರಾಜ್ಯದ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿದೆ. ಇದರಿಂದ ಹನೂರು ಕ್ಷೇತ್ರ ಪ್ರಸಿದ್ಧಿ ಪಡೆದಿದೆ. ಇಲ್ಲಿಗೆ ಆಗಮಿಸುವ ಭಕ್ತರು ಕಷ್ಟ ಕಾರ್ಪಣ್ಯಗಳು ನಿವಾರಣೆಯಾಗುತ್ತದೆ ಎಂಬ ಭಾವನೆಯನ್ನು ಹೊಂದಿದ್ದಾರೆ. ಹಾಗಾಗಿ ಮಾದಪ್ಪನ ಬಗ್ಗೆ ಭಕ್ತರು ಅಪಾರ ನಂಬಿಕೆಯನ್ನು ಇಟ್ಟಿದ್ದಾರೆ. ಆದ್ದರಿಂದ ಆ ಮಾದಪ್ಪ ಕ್ಷೇತ್ರದ ಅಭಿವೃದ್ಧಿಯ ಜತೆಗೆ ಜನರಿಗೆ ಸುಖ, ಶಾಂತಿಯನ್ನು ಕರುಣಿಸಲಿ, ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಇದೇ ವೇಳೆ ಶಾಸಕರು ದೇಗುಲದ ಅಭಿವೃದ್ಧಿಯ ಬಗ್ಗೆ ಅರ್ಚಕರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕ ಕರವೀರಸ್ವಾಮಿ, ಪಾರುಪತ್ತೇಗಾರ ಮಹದೇವಸ್ವಾಮಿ, ಹನೂರು ಪಿಎಸಿಸಿ ನಿರ್ದೇಶಕ ಮಂಜೇಶ್, ಮುಖಂಡರಾದ ಮಾದೇಶ್, ಜೆಸ್ಸಿಂ ಪಾಷ, ಮಹದೇವ್, ವೆಂಕಟೇಶ್, ಸೈಯದ್ ಬಸರತ್, ಜಾವದ್, ವೆಂಕಟೇಶ್, ಸುರೇಶ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net