ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಂತೆ ಸೂಚನೆ

24 HANUR 1
ಹೂಗ್ಯಂ ಗ್ರಾಮಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿದ ವೇಳೆ ಕಸದ ರಾಶಿ ತೆರವುಗೊಳಿಸುವಂತೆ ಹಾಗೂ ಚರಂಡಿ ನಿರ್ಮಿಸಲು ಅಗತ್ಯ ಕ್ರಮವಹಿಸುವಂತೆ ತಾಪಂ ಇಒ ಉಮೇಶ್ ಅವರಿಗೆ ಸೂಚಿಸಿದರು. ಮುರುಗೇಶ್ ಇತರರು ಇದ್ದರು.
Published on

ಹನೂರು: ಚರಂಡಿ ನಿರ್ಮಿಸಲು ಅಗತ್ಯ ಕ್ರಮ ವಹಿಸುವುದರ ಜತೆಗೆ ಕಸದ ರಾಶಿ ತೆರೆವುಗೊಳಿಸುವಂತೆ ಶಾಸಕ ಎಂ.ಆರ್.ಮಂಜುನಾಥ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಅವರಿಗೆ ಸೂಚಿಸಿದರು.

ತಾಲೂಕಿನ ಹೂಗ್ಯಂ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಚರಂಡಿಯಲ್ಲಿ ನೀರು ನಿಂತಿರುವುದು ಹಾಗೂ ಅಲ್ಲಲ್ಲಿ ಬಿದ್ದಿರುವ ಕಸದ ರಾಶಿಯನ್ನು ಕಂಡು ಅಧಿಕಾರಿಗೆ ಸೂಚಿಸಿದರು.

ಗ್ರಾಮದ ಚರಂಡಿಯಲ್ಲಿ ಕೊಳಚೆ ನೀರು ನಿಂತಿದ್ದು, ದುರ್ವಾಸನೆ ಬೀರುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಅಲ್ಲಲ್ಲಿ ಕಸದ ರಾಶಿ ಬಿದ್ದಿದ್ದು, ಅನೈರ್ಮಲ್ಯಕ್ಕೆ ಕಾರಣವಾಗುತ್ತಿದೆ. ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈ ಬಗ್ಗೆ ಕೂಡಲೇ ಅಗತ್ಯ ಕ್ರಮವಹಿಸಿ ಕಸದ ರಾಶಿ ತೆರವುಗೊಳಿಸಬೇಕು. ಕ್ರಿಯಾಯೋಜನೆ ತಯಾರಿಸಿ ಚರಂಡಿ ನಿರ್ಮಿಸಲು ಮುಂದಾಗಬೇಕು. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಉತ್ತಮ ಸೇವೆ ಒದಗಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಪಂ ಕಸ ವಿಲೇವಾರಿ ವಾಹನ ಕೆಟ್ಟು ನಿಂತು ವರ್ಷವಾಗಿದೆ. ಆದರೆ ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಸ್ವಚ್ಛತೆಯ ಕಡೆ ಗಮನಹರಿಸುತ್ತಿಲ್ಲ. ವಿದ್ಯುತ್ ಕಂಬಗಳಲ್ಲಿ ದೀಪವಿಲ್ಲ. ಈ ಬಗ್ಗೆ ಗ್ರಾಪಂಗೆ ಹಲವು ಬಾರಿ ತಿಳಿಸಿದರೂ ಗಮನಹರಿಸುತ್ತಿಲ್ಲ. ಇದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸುವಂತೆ ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು. ಈ ಬಗ್ಗೆ ಅಗತ್ಯ ಕ್ರಮವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮುರುಗೇಶ್ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net